kerala

ಮೇ 26ಕ್ಕೆ ದೇವರನಾಡಿಗೆ ಮುಂಗಾರು ಪ್ರವೇಶ!

Monsoon to Kerala on May 24

ಕೇರಳ: ಬಿಸಿಲಿನ ಬೇಗೆಯಿಂದ ಕಂಗೆಟ್ಟಿರುವ ಜನತೆಗೆ ಹಾಗೂ ಕೃಷಿ ಚಟುವಟಿಕೆಗಳ ನಿರೀಕ್ಷೆಯಲ್ಲಿರುವ ರೈತರಿಗೆ ಭಾರತೀಯ ಹವಾಮಾನ ಇಲಾಖೆ (IMD) ಸಿಹಿ ಸುದ್ದಿ ನೀಡಿದೆ. ಈ ಬಾರಿ ನೈಋತ್ಯ ಮುಂಗಾರು ಮಳೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ದೇಶವನ್ನು ಪ್ರವೇಶಿಸಲಿದೆ.

ಸಾಮಾನ್ಯವಾಗಿ ಜೂನ್ 1ರಂದು ಕೇರಳ ಪ್ರವೇಶಿಸಬೇಕಿದ್ದ ಮುಂಗಾರು,ಈ ಬಾರಿ ಸುಮಾರು ಒಂದು ವಾರ ಮುಂಚಿತವಾಗಿ ಅಂದರೆ ಮೇ 26ರಂದೇ ಕೇರಳಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಈಗಾಗಲೇ ಮುಂಗಾರು ಪ್ರವೇಶಿಸಿದ್ದು, ಅಲ್ಲಿಂದ ಕೇರಳದತ್ತ ವೇಗವಾಗಿ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರುನಾಡಿಗೆ ವರುಣನ ಪ್ರವೇಶ ಎಂದು!
ಕೇರಳಕ್ಕೆ ಮುಂಗಾರು ಪ್ರವೇಶಿಸಿದ ಸುಮಾರು ಒಂದು ವಾರದ ನಂತರ ಕರ್ನಾಟಕಕ್ಕೆ ಮಳೆಯ ಮಾರುತಗಳು ಲಗ್ಗೆ ಇಡುತ್ತವೆ. ಈ ಲೆಕ್ಕಾಚಾರದ ಪ್ರಕಾರ, ಜೂನ್ ಮೊದಲ ವಾರದಲ್ಲೇ ಕರುನಾಡಿನಾದ್ಯಂತ ಮುಂಗಾರು ಮಳೆಯಾಗುವ ನಿರೀಕ್ಷೆಯಿದೆ. ಕಳೆದ ವರ್ಷ ಮಳೆ ಕೊರತೆಯಿಂದ ತತ್ತರಿಸಿದ್ದ ರಾಜ್ಯಕ್ಕೆ ಈ ಬಾರಿಯ ಮುನ್ಸೂಚನೆ ಹೊಸ ಭರವಸೆ ಮೂಡಿಸಿದೆ.ಮುಂದಿನ 7 ದಿನ ರಾಜ್ಯದಲ್ಲಿ ‘ವರುಣ’ನ ಆರ್ಭಟವಾಗಲಿದೆ. ಮುಂಗಾರು ಪ್ರವೇಶಕ್ಕೂ ಮುನ್ನವೇ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದೆ. ಮುಂದಿನ ಒಂದು ವಾರ ರಾಜ್ಯದಾದ್ಯಂತ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಹವಾಮಾನದಲ್ಲಿ ಬದಲಾವಣೆ-ಹಗಲಿನಲ್ಲಿ ಬಿಸಿಲಿನ ಬೇಗೆ ಮುಂದುವರಿಯಲಿದ್ದರೂ, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಸಂಜೆ ವೇಳೆಗೆ ಮಳೆಯಾಗಲಿದೆ. ಗುಡುಗು, ಸಿಡಿಲು ಮತ್ತು ಬಿರುಗಾಳಿಯ ವೇಗ ಗಂಟೆಗೆ 40-50 ಕಿಮೀ ಇರಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ದಕ್ಷಿಣ ಮತ್ತು ಉತ್ತರ ಒಳನಾಡಿಗೆ ಅಲರ್ಟ್ ಘೋಷಣೆ!
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಹೈ-ಅಲರ್ಟ್ ಘೋಷಿಸಿದೆ.
#Freedom TV#Monsoon2026 #KarnatakaRain #IMDAlert #FarmersNews #MonsoonUpdate #KeralaRain #BengaluruRain #WeatherReport #FreedomTV #RainAlert #PreMonsoon #AgricultureIndia

Comments (0)

Your email address will not be published. Required fields are marked *

Back to top button