ಕಲಬುರಗಿ ಶಾಸಕ ಬಸವನಗೌಡ ಯತ್ನಾಳ ಮಾಲಿಕತ್ವದ ಸಕ್ಕರೆ ಕಾರ್ಖಾನೆ ಮುಚ್ಚಲು ನೋಟಿಸ್ ಜಾರಿ ಮಾಡಲಾಗಿದೆ. ಪರಿಸರ ನಿಯಮಾವಳಿ ಉಲ್ಲಂಘನೆ ಮಾಡಿರುವ ಹಿನ್ನಲೆ ಬಂದ್ ಮಾಡುವಂತೆ ನೋಟಿಸ್ ನೀಡಲಾಗಿದೆ. ಸಿದ್ದಶ್ರೀ ಸೌಹಾರ್ದ ಸಕ್ಕರೆ ಕಾರ್ಖಾನೆ ಗೆ ನೋಟಿಸ್ ಜಾರಿಯಾಗಿದ್ದು, ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಹೊರವಲಯದಲ್ಲಿರುವ ಕಾರ್ಖನೆಯಿಂದ ಪರಿಸರ ನಾಶವಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು.
ಸುಮಾರು ಒಂದು ವರ್ಷದಿಂದಲೂ ಪರಿಸರ ನಿಯಮಾವಳಿ ಉಲ್ಲಂಘನೆ ಮಾಡಿರುವುದು ಪತ್ತೆಯಾಗಿದೆ. ಇನ್ನು ಕಾರ್ಖಾನೆಗಳ ನೋಂದಣಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೆಎಸ್‌ಪಿಸಿಬಿ ಸಭೆಯಲ್ಲಿ ಅನುಮೋದನೆ ಸಿಕ್ಕಿತ್ತು. ಕಾರ್ಖಾನೆ ಪರಿಶೀಲನೆ ವೇಳೆ ಅವೈಜ್ಞಾನಿಕ ನಿರ್ವಹಣೆ ಸೇರಿ ಹಲವು ಗಂಭೀರ ಲೋಪಗಳು ಪತ್ತೆಯಾಗಿದ್ವು. ಕೆಎಸ್‌ಪಿಸಿಬಿಯು ಸಕ್ಕರೆ ಕಾರ್ಖಾನೆಗೆ ಕೆಲವು ಷರತ್ತು ವಿಧಿಸಿ ಅನುಮತಿ ನೀಡಲಾಗಿತ್ತು.
ಕಳೆದ ವರ್ಷ ಮಂಡಳಿ ಪ್ರಾದೇಶಿಕ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದಾಗ ಅನುಮತಿ ಪಡೆಯದೇ ಬಾಯ್ಲರ್ ಆರಂಭ ಮಾಡಿರೋದು ಬೆಳಕಿಗೆ ಬಂದಿತ್ತು. ಕಬ್ಬು ಅರೆಯುವಿಕೆ, ತ್ಯಾಜ್ಯ ಸಂಸ್ಕರಣಾ ಘಟಕವು ನಿರ್ಮಾಣ ಹಂತದಲ್ಲಿದ್ದರೂ ಅನುಮತಿ ಪಡೆಯದೇ ಡಿಸ್ಟಿಲರಿ ಘಟಕವನ್ನು ಸ್ಥಾಪಿಸಿದ್ದು ಕಂಡುಬಂದಿತ್ತು. ನಿಯಮ ಉಲ್ಲಂಘನೆ ಸಂಬಂಧ ವಿವರ ಪಡೆಯಲು ಮಂಡಳಿ, ಕಳೆದ ಮಾರ್ಚ್‌ನಲ್ಲಿ ಕಾರ್ಖಾನೆಗೆ ನೋಟಿಸ್ ಜಾರಿ ಮಾಡಿತ್ತು. ನಿಯಮ ಉಲ್ಲಂಘಿಸಿದ್ದರೂ ಒಂದು ವರ್ಷದಿಂದ ಕಾರ್ಖಾನೆ ವಿರುದ್ಧ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಪರಿಸರ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ಕಳೆದ ವಾರ ನಡೆದ ಕೆಎಸ್‌ಪಿಸಿಬಿ ಸಭೆಯಲ್ಲಿ ಕಾರ್ಖನೆ ಮುಚ್ಚಿಸುವಂತೆ ಆದೇಶ ನೀಡಿ ನೋಟಿಸ್ ಜಾರಿ ಮಾಡಲಾಗಿದೆ .