bengaluruಕ್ರೈಂ ಸ್ಟೋರಿ

ಗರ್ಭಿಣಿ ಚಿತ್ರ ತೆಗೆದ ಕಾಮುಕ- ಮೊಬೈಲ್‌ನಲ್ಲಿ ನೂರಾರು ವಿಡಿಯೋ!

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಮಹಿಳೆಯರ ಸುರಕ್ಷತೆಗೆ ಧಕ್ಕೆ ತರುವಂತಹ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಆಸ್ಪತ್ರೆಯ ಶೌಚಾಲಯದಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಇದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಮೊಬೈಲ್‌ನಲ್ಲಿ ಗುಟ್ಟಾಗಿ ಫೋಟೋ ತೆಗೆದು ಸಿಕ್ಕಿಬಿದ್ದಿರುವ ಅಸಹ್ಯಕರ ಘಟನೆ ಸರ್ಜಾಪುರ ಮುಖ್ಯರಸ್ತೆಯಲ್ಲಿರುವ ಅಪೋಲೊ ಬೆಲ್ಲೆನಸ್ ಚಾಂಪಿಯನ್ ಆಸ್ಪತ್ರೆಯಲ್ಲಿ ನಡೆದಿದೆ.

ಸಮಾಜ ತಲೆತಗ್ಗಿಸುವ ಘಟನೆ!


ಮೇ 21 ರಂದು ಗರ್ಭಿಣಿ ಮಹಿಳೆಯೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಆಸ್ಪತ್ರೆಯ ಶೌಚಾಲಯಕ್ಕೆ ತೆರಳಿದ್ದಾಗ, ಕಿಡಿಗೇಡಿಯೊಬ್ಬ ಶೌಚಾಲಯದ ಸಂದಿನಿಂದ ಮೊಬೈಲ್ ಇಟ್ಟು ಫೋಟೋ ಕ್ಲಿಕ್ಕಿಸಿದ್ದಾನೆ. ಇದನ್ನು ತಕ್ಷಣವೇ ಗಮನಿಸಿದ ಮಹಿಳೆ ಧೈರ್ಯ ಪ್ರದರ್ಶಿಸಿ, ಹೊರಬಂದು ಆಸ್ಪತ್ರೆಯ ಆಡಳಿತ ಮಂಡಳಿಗೆ ಹಾಗೂ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಮಹಿಳೆಯ ದೂರಿನ ಮೇರೆಗೆ ತಕ್ಷಣವೇ ಕಾರ್ಯಪ್ರವೃತ್ತರಾದ ಆಸ್ಪತ್ರೆ ಸಿಬ್ಬಂದಿ, ಅಲ್ಲೇ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಹಿಡಿದು ಆತನ ಮೊಬೈಲ್ ಫೋನ್ ಪರಿಶೀಲಿಸಿದ್ದಾರೆ. ಈ ವೇಳೆ ಆತನ ಮೊಬೈಲ್‌ನಲ್ಲಿ ಕೇವಲ ಈ ಮಹಿಳೆಯದ್ದು ಮಾತ್ರವಲ್ಲದೆ, ಬೇರೆ ಬೇರೆ ಕಡೆಗಳಲ್ಲಿ ಗುಟ್ಟಾಗಿ ತೆಗೆದಿದ್ದ ಹಲವಾರು ಮಹಿಳೆಯರ ಖಾಸಗಿ ಫೋಟೋಗಳು ಮತ್ತು ವಿಡಿಯೋಗಳು ಪತ್ತೆಯಾಗಿವೆ. ಇದನ್ನು ಕಂಡು ಆಸ್ಪತ್ರೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದಾರೆ. ಮಹಿಳೆಯರ ಫೋಟೋ ತೆಗೆಯುತ್ತಿದ್ದ ವಿಕೃತಕಾಮಿಯನ್ನು ಕೃಷ್ಣ ರಾಮ್ ಎಂದು ಗುರುತಿಸಲಾಗಿದೆ. ಆಸ್ಪತ್ರೆಯಂತಹ ಸಾರ್ವಜನಿಕ ಮತ್ತು ಸುರಕ್ಷಿತವಾಗಿರಬೇಕಾದ ಸ್ಥಳದಲ್ಲೇ ನಡೆದ ಈ ಘಟನೆಯಿಂದ ಗರ್ಭಿಣಿ ಮಹಿಳೆ ತೀವ್ರ ಮಾನಸಿಕ ಒತ್ತಡ ಹಾಗೂ ಆಘಾತಕ್ಕೆ ಒಳಗಾಗಿದ್ದಾರೆ.

ವರ್ತೂರು ಪೊಲೀಸರಿಂದ ಆರೋಪಿಯ ಬಂಧನ
ಘಟನೆಗೆ ಸಂಬಂಧಿಸಿದಂತೆ ಸದ್ಯ ಸಂತ್ರಸ್ತ ಮಹಿಳೆ ನೀಡಿದ ದೂರಿನನ್ವಯ ವಿಕೃತಕಾಮಿ ಕೃಷ್ಣರಾಮ್ ಹಾಗೂ ನಿರ್ಲಕ್ಷ್ಯ ವಹಿಸಿದ ಅಪೊಲೊ ಬೆಲ್ಲೆನಸ್ ಚಾಂಪಿಯನ್ ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಾಗಿದೆ. ತಕ್ಷಣವೇ ಕಾರ್ಯಾಚರಣೆ ನಡೆಸಿದ ವರ್ತೂರು ಠಾಣೆಯ ಪೊಲೀಸರು ಆರೋಪಿ ಕೃಷ್ಣರಾಮ್‌ನನ್ನು ಬಂಧಿಸಿ, ಆತನ ಮೊಬೈಲ್ ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.ಕಾಮುಕರು ತಮ್ಮ ತೆವಲು ತೀರಿಸಿಕೊಳ್ಳಲು ಹೊತ್ತು ಗೊತ್ತು ಸ್ಥಳ ಯಾವುದೂ ನಿಗದಿ ಮಾಡದೆ ತಮ್ಮ ತೃಷೆಗಾಗಿ ಈ ಅಸಹ್ಯಕರ ಕೆಲಸಗಳಿಗೆ ಮುಂದಾಗಿರುವುದು ಸಮಾಜ ತಲೆತಗ್ಗಿಸುವ ಸಂಗತಿಯಾಗಿದೆ.
ಆಸ್ಪತ್ರೆಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ ಇರುವ ಸಿಸಿಟಿವಿ ಹಾಗೂ ಭದ್ರತಾ ವ್ಯವಸ್ಥೆಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಈಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

#BengaluruCrime #HospitalHorror #WomenSafety #ApolloBelenusHospital #VarthurPolice #SarjapurRoad #CrimeAlert #ShameOnHumanity #VoyeurismCase #JusticeForWomen #KannadaNews #FreedomTV #BengaluruAlert #PublicSafety

Comments (0)

Your email address will not be published. Required fields are marked *

Back to top button