Freedom TV

ಏನಿದು ಸಾಂದೀಪನಿ ಯೋಜನೆ: ಯಾರಿಗೆ ಲಾಭ?

 ಬೆಂಗಳೂರು :  ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಬ್ರಾಹ್ಮಣ ವಿದ್ಯಾರ್ಥಿಗಳಿಗಾಗಿ ಸಾಂದೀಪನಿ ಶಿಷ್ಯ ವೇತನ ಯೋಜನೆಯನ್ನು ಪ್ರಾರಂಭ ಮಾಡಲಾಗಿದೆ. ಅರ್ಹ ಬಡ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯಗಳು ಸಿಗಲಿವೆ. ಶಿಕ್ಷಣ, ಪಠ್ಯ ಪುಸ್ತಕ, ಎಲೆಕ್ಟ್ರಾನಿಕ್ ಉಪಕರಣ, ಇನ್ನಿತರ ಹಲವು ಅಧ್ಯಯನ ಉಪಕರಣಗಳು, ಹಾಸ್ಟೆಲ್, ಸಾರಿಗೆ ವ್ಯವಸ್ಥೆ ಹಾಗೂ ಬಟ್ಟೆ ಕೂಡಾ ಸಿಗಲಿದೆ.

ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸ್ವಾವಲಂಬಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಉಪಯೋಗವನ್ನು ಅರ್ಹರು ಪಡೆದುಕೊಳ್ಳಿ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ತಮ್ಮ ಕಚೇರಿಯಲ್ಲಿ ನಿಗಮದ ಡಿಬಿಟಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳು ಸ್ವಯಂ ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳಿಗಾಗಿ ಬ್ಯಾಂಕ್‌ನಿಂದ ಸಾಲ ಪಡೆದಿದ್ದಲ್ಲಿ, ಸಾಲದ ಪೈಕಿ ಶೇ. 20 ರಷ್ಟು ಹಣವನ್ನು ಸರ್ಕಾರ ‘ಸ್ವಾವಲಂಬಿ’ ಯೋಜನೆ ಅಡಿಯಲ್ಲಿ ಸಹಾಯ ಧನ ನೀಡಲಿದೆ.

Comments (0)

Your email address will not be published. Required fields are marked *

Back to top button