ರಾಜಕೀಯ

BJP ರಾಜ್ಯ ವಕ್ತಾರ ಎಂ.ಜಿ ಮಹೇಶ್ ಪಕ್ಷದಿಂದ ಕಿಕ್‌ಔಟ್!

ಬೆಂಗಳೂರು : ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಜಿ ಮಹೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ. ಬಿಜೆಪಿ ಹೈಕಮಾಂಡ್ ಮತ್ತು ರಾಜ್ಯ ನಾಯಕರ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದ ಹಿನ್ನಲೆಯಲ್ಲಿ ಉಚ್ಛಾಟನೆ ಮಾಡಲಾಗಿದೆ.

ಜೂನ್ 19ರಂದು ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಎಂ.ಜಿ. ಮಹೇಶ್ ಅವರು ಬಿಜೆಪಿ ಹೈಕಮಾಂಡ್ ಮತ್ತು ರಾಜ್ಯ ನಾಯಕರ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದರು. ಈ ಮೂಲಕ ಎಂ.ಜಿ. ಮಹೇಶ್ ಅವರು ಪಕ್ಷದ ಶಿಸ್ತು ಉಲ್ಲಂಘಿಸಿದ್ದರು. ಎಂ.ಜಿ. ಮಹೇಶ್ ಅವರ ಈ ವರ್ತನೆಗೆ ಸಂಬಂಧಿಸಿದಂತೆ ರಾಜ್ಯ ಶಿಸ್ತು ಸಮಿತಿಯು ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಉತ್ತರ ಕೇಳಿತ್ತು.

ನೋಟಿಸ್‌ಗೆ ಎಂ.ಜಿ. ಮಹೇಶ್ ಅವರು ನೀಡಿದ ಸ್ಪಷ್ಟೀಕರಣವು ಸಮಂಜಸವಾಗಿಲ್ಲ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ, 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.

Comments (0)

Your email address will not be published. Required fields are marked *

Back to top button