bengaluru

BMTC ಬಸ್‌ಗಳ ನಡುವೆ ಭೀಕರ ಅಪಘಾತ – ಚಾಲಕ ಸೇರಿ ಮೂವರ ಸ್ಥಿತಿ ಗಂಭೀರ!

Horrific accident involving BMTC buses – three people, including the driver, in critical condition!

ಬೆಂಗಳೂರು: ಕೆ.ಆರ್. ಸರ್ಕಲ್‌ನಲ್ಲಿ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಡೆಡ್ಲಿ ಆ್ಯಕ್ಸಿಡೆಂಟ್ ನಡೆದಿದೆ. ಸಿಗ್ನಲ್‌ನಲ್ಲಿ ನಿಂತಿದ್ದ ಬಿಎಂಟಿಸಿ ಬಸ್‌ಗೆ ಮತ್ತೊಂದು ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಮೂವರ ಸ್ಥಿತಿ ಗಂಭೀರವಾಗಿದೆ.

ಹಿಂಬದಿಯಿಂದ ಮತ್ತೊಂದು ಬಸ್ ಡಿಕ್ಕಿ ಹೊಡೆದಿದ್ದು, ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾದಲ್ಲಿ ಎಂಟು ಜನ ಪ್ರಯಾಣಿಕರು ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಪ್ರಯಾಣಿಕರ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಸೇಂಟ್ ಮಾರ್ಥಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ನಯಾರಾ ಬಾನು, ಸಿಮ್ರಾನ್, ದಾದು ಖಲೇಂದರ್, ಮುಬಾರಕ್, ತನ್ವೀರ್​​ಗೆ ಚಿಕಿತ್ಸೆ ಮುಂದುವರೆದಿದೆ. ಅಪಘಾತದಿಂದಾಗಿ ಸ್ಥಳದಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದ್ದು, ಕ್ರೇನ್ ಬಳಸಿ ಬಸ್‌ಗಳನ್ನು ತೆರವುಗೊಳಿಸಲಾಗಿದೆ. 

Comments (0)

Your email address will not be published. Required fields are marked *

Back to top button