
ಭಾರತದ ಬ್ಯಾಂಕ್ಗಳಿಗೆ ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ನೀರವ್ ಮೋದಿ ಶೀಘ್ರವೇ ಭಾರತಕ್ಕೆ ಹಸ್ತಾಂತರವಾಗುವ ಸಾಧ್ಯತೆಯಿದೆ. ಲಂಡನ್ ಹೈಕೋರ್ಟ್ ಸೇರಿದಂತೆ ಎಲ್ಲಾ ಕೋರ್ಟ್ಗಳಲ್ಲಿ ನೀರವ್ ಮೋದಿ ನಡೆಸಿದ್ದ ಕಾನೂನು ಸಮರಕ್ಕೆ ತೀವ್ರ ಹಿನ್ನಡೆಯಾಗಿದೆ.
ಭಾರತದಲ್ಲಿ ವಿಚಾರಣೆ ಎದುರಿಸಲು ನೀರವ್ ಮೋದಿಗೆ ಲಂಡನ್ನ ಕೋರ್ಟ್ ಆದೇಶ ನೀಡಿದೆ. ಹಲವು ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ಸಹಸ್ತ್ರಾರು ಕೋಟಿ ರೂಪಾಯಿ ವಂಚಿಸಿದ ಆರೋಪವನ್ನು ನೀರವ್ ಮೋದಿ ಎದುರಿಸುತ್ತಿದ್ದಾರೆ. ನೀರವ್ ಮೋದಿ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದ್ದು, ತಾರ್ಕಿಕ ಅಂತ್ಯ ಕೊಂಡೊಯ್ಯುವ ವಿಶ್ವಾಸ ವ್ಯಕ್ತಪಡಿಸಿದೆ.
ಇತ್ತೀಚೆಗೆ ತನಿಖಾ ತಂಡದ ಹಿರಿಯ ಅಧಿಕಾರಿಗಳು ಲಂಡನ್ಗೆ ಭೇಟಿ ನೀಡಿದ್ದು, ಹಸ್ತಾಂತರ ಪ್ರಕ್ರಿಯೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಕೋರ್ಟ್ಗೆ ಸಲ್ಲಿಸಿದ್ದಾರೆ. ನೀರವ್ ಮೋದಿ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರತಿಪಕ್ಷ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಈ ವಿಚಾರದಲ್ಲಿ ತೀವ್ರ ವಾಗ್ಧಾಳಿ ನಡೆಸಿತ್ತು.




