MYSOREಜಿಲ್ಲೆ

ಅಕ್ಟೋಬರ್ 11ಕ್ಕೆ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ!

Mysuru Dasara Festival inauguration on October 11!

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ-2026 ಉದ್ಘಾಟನೆಗೆ ದಿನಾಂಕ ಫಿಕ್ಸ್‌ ಆಗಿದ್ದು, ಅಕ್ಟೋಬರ್ 11ರಂದು ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿ ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ.

ಈ ಬಾರಿ ಜುಲೈ 26 ರಂದು ಗಜಪಯಣ ಆರಂಭವಾಗಲಿದ್ದು, ಅ.11ಕ್ಕೆ ದಸರಾ ಉದ್ಘಾಟನೆ ಆಗಲಿದೆ. ಅ.21 ರಂದು ವಿಜಯದಶಮಿ ಜಂಬೂಸವಾರಿ ನಡೆಯಲಿದ್ದು, ಅ.21ರ ಮಧ್ಯಾಹ್ನ 1.36ರಿಂದ1.56ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಿರುವ ಸಿಎಂ ಡಿ.ಕೆ. ಶಿವಕುಮಾರ್. ಸಂಜೆ 4.10 ರ ಮೀನಾ ಲಗ್ನದಲ್ಲಿ ಜಂಬೂಸವಾರಿಗೆ ಮುಖ್ಯಮಂತ್ರಿ ಡಿಕೆಶಿ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ.

ಇಂದು ವಿಧಾನಸೌಧದಲ್ಲಿ ಸಿಎಂ ಡಿಕೆಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಸಚಿವ ಯತೀಂದ್ರ, ಸಂಸದ ಯದುವೀರ್ ಒಡೆಯರ್​, ಜಿ.ಟಿ.ದೇವೇಗೌಡ, ಹೆಚ್.ಸಿ.ಮಹದೇವಪ್ಪ ಸೇರಿ ಮೈಸೂರು ಭಾಗದ ಜನಪ್ರತಿನಿಧಿಗಳು ಭಾಗಿಯಾಗಿದ್ರು. ದಸರಾ ಮಹೋತ್ಸವಕ್ಕೆ 50 ಕೋಟಿ ಅನುದಾನಕ್ಕೆ ಬೇಡಿಕೆ ಇಡಲಾಗಿದೆ.

Comments (0)

Your email address will not be published. Required fields are marked *

Back to top button