bengaluru

ಬೆಂಗಳೂರಲ್ಲಿ ಮುಂದುವರೆದ ಆಪರೇಷನ್ ಫುಟ್​ಪಾತ್!

Operation Footpath continued in Bangalore!

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಪರೇಷನ್ ಫುಟ್​ಪಾತ್​ ಮುಂದುವರೆದಿದೆ. ಕಳೆದ ಕೆಲವು ದಿನಗಳಿಂದ ನಿತಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸಾರ್ವಜನಿಕರ ಓಡಾಟಕ್ಕೆ ಅಡ್ಡಿಪಡಿಸಿ ಫುಟ್​​ಪಾತ್​ ಒತ್ತುವರಿ ಮಾಡಿಕೊಂಡಿರುವ ಅಂಗಡಿ-ಮುಂಗಟ್ಟುಗಳನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲಾಗುತ್ತಿದೆ.

ಈಗಾಗಲೇ 350 ಕಿ. ಮೀಟರ್​ವರೆಗೂ ಫುಟ್​ಪಾತ್ ಕ್ಲಿಯರ್ ಮಾಡಲಾಗಿದೆ. ಫುಟ್ ಪಾತ್ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಬೀದಿ ಬದಿ ವ್ಯಾಪಾರಸ್ಥರು ಹೋರಾಟ ನಡೆಸಿದ್ದಾರೆ. ನಗರದ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆಯನ್ನು ನಡೆಸುವ ಮೂಲಕ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. 

ವ್ಯಾಪಾರಿಗಳ ವಿರೋಧದ ಮಧ್ಯೆಯೂ GBA ಯಶಸ್ವಿ ಕಾರ್ಯಾಚರಣೆ ನಡೆಸುತ್ತಿದೆ. ಪಾದಚಾರಿ ಮಾರ್ಗಗಳನ್ನು ಆಕ್ರಮಿಸಿಕೊಂಡಿದ್ದ ವಾಣಿಜ್ಯ ಮಳಿಗೆಗಳ ಬೋರ್ಡ್‌ಗಳು, ಅಕ್ರಮ ನಿರ್ಮಾಣಗಳು ಹಾಗೂ ವಾಹನ ನಿಲ್ದಾಣಗಳನ್ನು ಜೆಸಿಬಿ ಮೂಲಕ ನೆಲಸಮಗೊಳಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿಯೂ ಈ ಕಾರ್ಯಾಚರಣೆ ನಗರದ ಮೂಲೆ ಮೂಲೆಗಳಿಗೂ ವಿಸ್ತರಣೆಯಾಗುವ ಸಾಧ್ಯತೆ ಇದೆ.

Comments (0)

Your email address will not be published. Required fields are marked *

Back to top button