ರಾಜ್ಯ

ಕರ್ನಾಟಕದಲ್ಲಿ ಬರದ ಆತಂಕ – ಪರಿಹಾರಕ್ಕೆ ಮೋದಿಗೆ ಪತ್ರ ಬರೆದ ಸಿಎಂ ಡಿಕೆಶಿ!

Concerned about drought in Karnataka - CM DK wrote a letter to Modi seeking relief!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬರಗಾಲದ ಭೀಕರತೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಮಳೆಯ ಕೊರತೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಕೃಷಿ ಚಟುವಟಿಕೆಗಳಿಗೆ ಮಾತ್ರವಲ್ಲದೆ, ಮುಂಬರುವ ದಿನಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗೂ ಭಾರಿ ಸಂಕಷ್ಟ ಎದುರಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ರಾಜ್ಯದಲ್ಲಿ ಎದುರಾಗಿರುವ ಈ ಪರಿಸ್ಥಿತಿಯನ್ನ ಖುದ್ದಾಗಿ ವೀಕ್ಷಿಸಲು ಹಾಗೂ ಹಾನಿಯ ಪ್ರಮಾಣವನ್ನು ಅಳೆಯಲು ಕೇಂದ್ರದ ಉನ್ನತ ಮಟ್ಟದ ಅಧ್ಯಯನ ತಂಡವನ್ನು ತಕ್ಷಣವೇ ಕರ್ನಾಟಕಕ್ಕೆ ನಿಯೋಜಿಸಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

ಬರ ನಿರ್ವಹಣೆಗಾಗಿ ಮತ್ತು ಸಂಕಷ್ಟದಲ್ಲಿರುವ ರೈತರ ನೆರವಿಗಾಗಿ ಕೇಂದ್ರದಿಂದ ಅಗತ್ಯವಿರುವ ತುರ್ತು ಪರಿಹಾರ ಹಾಗೂ ಆರ್ಥಿಕ ನೆರವನ್ನು ಬಿಡುಗಡೆ ಮಾಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರದ ಸಹಾಯವನ್ನು ಕೋರುವುದರ ಜೊತೆಗೆ, ರಾಜ್ಯ ಸರ್ಕಾರವು ತನ್ನದೇ ಆದ ಸಂಪನ್ಮೂಲಗಳನ್ನು ಬಳಸಿಕೊಂಡು ಪರಿಸ್ಥಿತಿಯನ್ನು ಹತೋಟಿಗೆ ತರಲು ಸಜ್ಜಾಗಿದೆ.

ಬಿ.ವೈ. ವಿಜಯೇಂದ್ರ ಲೇವಡಿ

ಸಿಎಂ ಡಿ.ಕೆ. ಶಿವಕುಮಾರ್ ಅವರ ಈ ನಡೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುವ ಮೂಲಕ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಬರ ನಿರ್ವಹಣೆಗೆ ರಾಜ್ಯ ಸರ್ಕಾರ ಇದುವರೆಗೂ ಏನು ಮಾಡಿದೆ ಎಂಬುದನ್ನು ಮೊದಲು ಜನರ ಮುಂದಿಡಿ” ಎಂದು ಬಿ.ವೈ. ವಿಜಯೇಂದ್ರ ಸವಾಲು ಹಾಕಿದ್ದಾರೆ.

Comments (0)

Your email address will not be published. Required fields are marked *

Back to top button