ರಾಜ್ಯದಲ್ಲಿ ಮತ್ತೆ ಕೋವಿಡ್ ಆತಂಕ – 32 ಜನರಲ್ಲಿ ಸೋಂಕು ದೃಢ!
Covid concerns again in the state - 32 people test positive for the virus!

ಬೆಂಗಳೂರು: ನೆರೆಯ ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವುದು ಇದೀಗ ಕರ್ನಾಟಕದಲ್ಲೂ ಆತಂಕದ ಛಾಯೆಯನ್ನು ಮೂಡಿಸಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.
ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯ ಅಂಕಿಅಂಶಗಳನ್ನು ಗಮನಿಸಿದರೆ, ಸೋಂಕು ಹರಡುವ ವೇಗ ಹೆಚ್ಚುತ್ತಿರುವುದು ಸ್ಪಷ್ಟವಾಗುತ್ತದೆ. ಕಳೆದ ಜೂನ್ ತಿಂಗಳ ಪೂರ್ತಿ ಅವಧಿಯಲ್ಲಿ ರಾಜ್ಯದಲ್ಲಿ ಕೇವಲ 14 ಪಾಸಿಟಿವ್ ಪ್ರಕರಣಗಳು ಮಾತ್ರ ದಾಖಲಾಗಿದ್ದವು. ಆದರೆ, ಜುಲೈ ತಿಂಗಳ ಕೇವಲ ಮೊದಲ 10 ದಿನಗಳಲ್ಲೇ ಈ ಸಂಖ್ಯೆ 32ಕ್ಕೆ ತಲುಪಿದೆ.
193 ಶಂಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 32 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. 6 ವರ್ಷಗಳ ಹಿಂದೆ ಜಗತ್ತನ್ನ ನಡುಗಿಸಿದ್ದ ಹೆಮ್ಮಾರಿ ಮತ್ತೆ ಕೋವಿಡ್ ಮತ್ತೆ ಲಗ್ಗೆ ಇಟ್ಟಿದೆ.
ಕೋವಿಡ್ ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಸಾರ್ವಜನಿಕರಿಗೆ ಹಾಗೂ ವೈದ್ಯಕೀಯ ಸಿಬ್ಬಂದಿಗೆ ಪ್ರಮುಖ ಸೂಚನೆಗಳನ್ನು ನೀಡಿದೆ. ಕೆಮ್ಮು, ಜ್ವರ, ಶೀತ ಅಥವಾ ಉಸಿರಾಟದ ತೊಂದರೆಯಂತಹ ಕೋವಿಡ್ ಗುಣಲಕ್ಷಣಗಳು ಕಂಡುಬಂದರೆ ತಕ್ಷಣವೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ತಿಳಿಸಲಾಗಿದೆ.




