ರಾಜಕೀಯ
ಮಾಜಿ ಪ್ರಧಾನಿ H.D.ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು!
H.D. Deve Gowda's wife's health deteriorated - admitted to hospital!

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೆನ್ನಮ್ಮ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಉಸಿರಾಟದ ಸಮಸ್ಯೆಯ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಕುಟುಂಬಸ್ಥರು ತುರ್ತಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಚೆನ್ನಮ್ಮ ಅವರ ಆರೋಗ್ಯವನ್ನು ಪರೀಕ್ಷಿಸಿರುವ ವೈದ್ಯರು, ಮುಂದಿನ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ.
ಚೆನ್ನಮ್ಮ ಅವರಿಗೆ ಇನ್ನೂ 3 ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಯುವ ಸಾಧ್ಯತೆಯಿದೆ. ಚೆನ್ನಮ್ಮ ಅವರ ಪುತ್ರ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಹೆಚ್ ಡಿ ರೇವಣ್ಣ ಹಾಗೂ ಕುಟುಂಬದ ಇತರ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ.




