bengaluru

ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ ಆರೋಪ – ಇನ್‌ಫ್ಲೂಯೆನ್ಸರ್ ಅಮುಕು ಡುಮುಕು ವಿರುದ್ಧ FIR!

Allegation of inappropriate behavior with female staff - FIR against influencer Amuku Dumuku!

ಬೆಂಗಳೂರು : ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಸಿರುವ ಆರೋಪದ ಮೇಲೆ ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ಮಂಜು ಅಲಿಯಾಸ್ ಅಮುಕು ಡುಮುಕು ವಿರುದ್ಧ ಮೇಲೆ FIR ದಾಖಲಾಗಿದೆ.

ಜುಲೈ 9ರಂದು ರಾತ್ರಿ ಮಂಜು ತಮ್ಮ ಸ್ನೇಹಿತರೊಂದಿಗೆ ನಗರದ ರೆಸ್ಟೋ ಬಾರ್‌ಗೆ ಭೇಟಿ ನೀಡಿ ಊಟ ಹಾಗೂ ಮದ್ಯ ಸೇವಿಸಿದ್ದರು. ಬಳಿಕ ಬಿಲ್ ಪಾವತಿಸುವ ವೇಳೆ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬಾರ್‌ನಿಂದ ಹೊರಡುವಾಗ ಮಹಿಳಾ ಸಿಬ್ಬಂದಿ ಅವರನ್ನು ತಡೆದು ಪ್ರಶ್ನಿಸಿದಾಗ, ಮಂಜು ಉದ್ಧಟತನ ತೋರಿದ್ದಾರೆ. ಅಷ್ಟೇ ಅಲ್ಲದೆ, ತಮ್ಮೊಂದಿಗೆ ಸೆಲ್ಫಿ ತೆಗೆದುಕೊಳ್ಳಲೇಬೇಕೆಂದು ಮಹಿಳಾ ಸಿಬ್ಬಂದಿಗೆ ಒತ್ತಾಯಿಸಿ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಅಮುಕು ಡುಮುಕು ಮತ್ತು ಅವರ ಸ್ನೇಹಿತರ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button