ಉಪಸಭಾಪತಿ ಎಂ.ಕೆ. ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು!
Deputy Chairman M.K. Pranesh Parishad membership cancelled!

ನವದೆಹಲಿ : ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರ ಮತದಾನದ ಹಕ್ಕಿನ ಕುರಿತಾದ ವಿವಾದದಲ್ಲಿ ಸುಪ್ರೀಂ ಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ.
2021ರ ಡಿಸೆಂಬರ್ನಲ್ಲಿ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಎಂ.ಕೆ. ಪ್ರಾಣೇಶ್ ಅವರು 1,188 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಗಾಯತ್ರಿ ಶಾಂತೇಗೌಡ ಅವರು 1,182 ಮತಗಳನ್ನು ಗಳಿಸಿದ್ದರು. ಕೇವಲ ಆರು ಮತಗಳ ಅಂತರದಿಂದ ಪ್ರಾಣೇಶ್ ಜಯಭೇರಿ ಬಾರಿಸಿದ್ದರು.
ಆದರೆ, ಈ ಚುನಾವಣೆಯಲ್ಲಿ ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಮತ್ತು ಮೂಡಿಗೆರೆ ಪಟ್ಟಣ ಪಂಚಾಯಿತಿಗಳ 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು. ಈ ಬೆಳವಣಿಗೆಯನ್ನು ಪ್ರಶ್ನಿಸಿ ಗಾಯತ್ರಿ ಶಾಂತೇಗೌಡ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿದ್ದು, ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಇದರೊಂದಿಗೆ ಪ್ರಾಣೇಶ್ ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದಾಗಿದೆ.




