ಸಂಪುಟ ವಿಸ್ತರಣೆ ಮುಹೂರ್ತ ಫಿಕ್ಸ್ – ಜು.23ರಂದು ನೂತನ ಸಚಿವರ ಪ್ರಮಾಣವಚನ!
Cabinet expansion date fixed – swearing-in of new ministers on July 23!

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಜುಲೈ 23ರಂದು ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯುವುದು ಬಹುತೇಕ ಖಚಿತವಾಗಿದೆ ಎಂದು ‘ಫ್ರೀಡಂ ಟಿವಿ’ಗೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಸಾಲು ಸಾಲು ಸಭೆಗಳು ಹಾಗೂ ಸುದೀರ್ಘ ಚರ್ಚೆಗಳ ಬಳಿಕ ಹೈಕಮಾಂಡ್ ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ತೋರಿದ್ದು, ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಿದ್ಧತೆಗಳು ಆರಂಭವಾಗಿವೆ.
ಸಂಪುಟ ವಿಸ್ತರಣೆಯ ಆಕಾಂಕ್ಷಿಗಳ ಪಟ್ಟಿ ಇಂದು ದೆಹಲಿಯಲ್ಲಿ ನಿಗದಿಯಾಗಿದ್ದ ವರಿಷ್ಠರ ಪ್ರಮುಖ ಸಭೆಯು ನಾಳೆಗೆ ಮುಂದೂಡಲ್ಪಟ್ಟಿದೆ. ವರಿಷ್ಠರ ಲಭ್ಯತೆ ಮತ್ತು ಅಂತಿಮ ಹಂತದ ಮಾತುಕತೆಗಳ ಕಾರಣದಿಂದಾಗಿ ಸಭೆಯ ದಿನಾಂಕವನ್ನು ಬದಲಾಯಿಸಲಾಗಿದ್ದು, ನಾಳೆ ನಡೆಯಲಿರುವ ಸಭೆಯಲ್ಲಿ ಅಂತಿಮ ಪಟ್ಟಿಗೆಅಧಿಕೃತ ಮುದ್ರೆ ಬೀಳಲಿದೆ.
ಸಂಪುಟ ಸೇರಲು ಹಲವು ಹಿರಿಯ ಹಾಗೂ ಕಿರಿಯ ಶಾಸಕರು ತೀವ್ರ ಕಸರತ್ತು ನಡೆಸುತ್ತಿದ್ದು, ದಿನಾಂಕ ನಿಗದಿಯಾಗುತ್ತಿದ್ದಂತೆಯೇ ರಾಜಕೀಯ ವಲಯದಲ್ಲಿ ಕೌಂಟ್‌ಡೌನ್ ಶುರುವಾಗಿದೆ. ನಾಳೆ ದೆಹಲಿಯಲ್ಲಿ ನಡೆಯುವ ಹೈಕಮಾಂಡ್ ಸಭೆಯ ಬಳಿಕ ಅಂತಿಮವಾಗಿ ಯಾರ್ಯಾರಿಗೆ ಮಂತ್ರಿಗಿರಿ ಸಿಗಲಿದೆ ಎಂಬ ಸ್ಪಷ್ಟ ಚಿತ್ರಣ ಸಿಗಲಿದೆ.




