
ನವದೆಹಲಿ : ಸಿಜೆಪಿ ಪ್ರತಿಭಟನೆ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕಾವು ದೇಶಾದ್ಯಂತ ಭುಗಿಲೆದ್ದಿತ್ತು. ಇದೀಗ ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ಮತ್ತು ಕಾಂಗ್ರೆಸ್‌ನ ತೀವ್ರ ಹೋರಾಟಕ್ಕೆ ತಲೆಬಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ನಿರಂತರವಾಗಿ ಧರಣಿ ನಡೆಸುತ್ತಿತ್ತು. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ಶಿಕ್ಷಣ ಸಚಿವಾಲಯದ ವಿರುದ್ಧ ಹಾಗೂ ನೀಟ್ ಅಕ್ರಮ ಖಂಡಿಸಿ ನಡೆದ ಈ ಪ್ರತಿಭಟನೆಯು ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿತ್ತು.




