
ಕೋಲಾರ : ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ತನ್ನಿಬ್ಬರು ಮಕ್ಕಳೊಂದಿಗೆ ತಾಯಿ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ಛತ್ರಕೋಡಿಹಳ್ಳಿ ಬಳಿ ನಡೆದಿದೆ. ಬೆಗ್ಲಿಬೆಣಜೇನಹಳ್ಳಿ ಗ್ರಾಮದ ತಾಯಿ ಪ್ರಮೀಳ (40) ಮಗಳು ಸ್ವಪ್ನ (22) ಹಾಗೂ ಮಗ ಚರಣ್ (18) ಮೃತರು.
ಇತ್ತೀಚೆಗೆ ಮನೆ ಕಟ್ಟಲು ಸುಮಾರು 15 ಲಕ್ಷ ಕೈ ಸಾಲ ಮಾಡಿಕೊಂಡಿದ್ದು, ಪದೆ ಪದೆ ಖಾಸಗಿ ಫೈನಾನ್ಸ್‌ನವರ ಕಾಟ, ಇತ್ತ ಸಂಘಗಳಲ್ಲಿ ಸಾಲ ಪಡೆದಿದ್ದವರ ಕಾಟದಿಂದ ಬೇಸತ್ತು ನಿನ್ನೆ ರಾತ್ರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಹೊಂಡದಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಿರುಕುಳ ನೀಡಿದ ಫೈನಾನ್ಸ್ ಸಿಬ್ಬಂದಿಯನ್ನು ಪತ್ತೆ ಹಚ್ಚಲು ತನಿಖೆಯನ್ನು ಚುರುಕುಗೊಳಿಸಿದ್ದಾರೆ.




