ರಾಜ್ಯ

SBI ಮ್ಯಾನೇಜರ್‌ ಮೇಲೆ ಮಾಜಿ ಕೇಂದ್ರ ಸಚಿವ ಅಳಗಿರಿ ಪುತ್ರಿಯಿಂದ ಹಲ್ಲೆ!

Former Union Minister Alagiri's daughter assaults SBI manager!

ಚೆನ್ನೈ: ಮಾಜಿ ಕೇಂದ್ರ ಸಚಿವ ಎಂ.ಕೆ. ಅಳಗಿರಿ ಅವರ ಪುತ್ರಿ ಕಾಯಲ್ವಿಳಿ SBI ಬ್ಯಾಂಕ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ್ದಾರೆ. ಕಾಯಲ್ವಿಳಿ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿದೆ.

ಬ್ಯಾಂಕ್‌ನಲ್ಲಿ ಮ್ಯಾನೇಜರ್‌ ಜೊತೆ ಮಹಿಳೆ ವಾಗ್ವಾದ ನಡೆಸಿದ್ದಾರೆ. ಈ ವೇಳೆ ಕಾಯಲ್ವಿಳಿ ಇದ್ದಕ್ಕಿದ್ದಂತೆ ಎದ್ದು ಬ್ಯಾಂಕ್ ವ್ಯವಸ್ಥಾಪಕರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅವರನ್ನು ವ್ಯಕ್ತಿಯೊಬ್ಬರು ತಡೆಯಲು ಯತ್ನಿಸಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಎಸ್‌ಬಿಐ ಅಡ್ಯಾರ್ ಶಾಖೆಯ ಬ್ಯಾಂಕ್ ಮ್ಯಾನೇಜರ್‌, ಕಾಯಲ್ವಿಳಿ ಅವರ ಬಳಿ ಅವರ ಒಡೆತನದ ವಾಣಿಜ್ಯ ಕಟ್ಟಡದಲ್ಲಿ ಹಾಳಾದ ಲಿಫ್ಟ್ ಸರಿಪಡಿಸುವಂತೆ ಕೇಳಿಕೊಂಡಿದ್ದರು. ಈ ವೇಳೆ, ಇಬ್ಬರ ನಡುವೆ ವಾಗ್ವಾದ ನಡೆದಿದೆ. ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ SBI ಬ್ಯಾಂಕ್ ಮ್ಯಾನೇಜರ್ ದೂರು ನೀಡಿದ್ದು, ಮಾಜಿ ಕೇಂದ್ರ ಸಚಿವ ಎಂ.ಕೆ. ಅಳಗಿರಿ ವಿರುದ್ಧ ಪ್ರಕರಣ ದಾಖಲಾಗಿದೆ.

Comments (0)

Your email address will not be published. Required fields are marked *

Back to top button