ರಾಜಕೀಯ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

Siddaramaiah announces retirement from electoral politics!

ಮಂಡ್ಯ : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಇತ್ತೀಚೆಗೆ ಕರ್ನಾಟಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರು ಇದೀಗ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ನಡೆದ ಕೃಷ್ಣರವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂಬರುವ 2028ರ ವಿಧಾನಸಭೆ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ದಶಕಗಳ ಕಾಲ ರಾಜ್ಯ ರಾಜಕಾರಣದಲ್ಲಿ ಮುಂಚೂಣಿ ನಾಯಕರಾಗಿ, ಬಡವರು ಹಾಗೂ ಹಿಂದುಳಿದ ವರ್ಗಗಳ ಧ್ವನಿಯಾಗಿ ಗುರುತಿಸಿಕೊಂಡಿರುವ ಸಿದ್ದರಾಮಯ್ಯ ಅವರ ಈ ನಿರ್ಣಯ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಸಿದ್ದರಾಮಯ್ಯ ಅವರು ಎರಡು ಅವಧಿಗಳಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದು, ಒಟ್ಟು 8 ವರ್ಷಗಳಿಗೂ ಹೆಚ್ಚು ಕಾಲ ಅಧಿಕಾರ ನಡೆಸುವ ಮೂಲಕ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನೂ ಬರೆದಿದ್ದಾರೆ.

ಮೊದಲ ಅವಧಿಯಲ್ಲಿ 13 ಮೇ 2013 ರಿಂದ 15 ಮೇ 2018 ರವರೆಗೆ ಅವರು ಸಿಎಂ ಆಗಿ 5 ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರೆ, ಎರಡನೇ ಅವಧಿಯಲ್ಲಿ 20 ಮೇ 2023 ರಿಂದ 3 ಜೂನ್ 2026 ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.

Comments (0)

Your email address will not be published. Required fields are marked *

Back to top button