ಜಿಲ್ಲೆ

ಕಾಡುಹಂದಿ ಶಿಕಾರಿಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು – ಮೂವರು ಅರೆಸ್ಟ್‌!

Man dies after being hit by electric wire planted by wild boar hunter - Three arrested!

ಚಿಕ್ಕಮಗಳೂರು : ಕಾಡುಹಂದಿ ಬೇಟೆಯಾಡಲು ಅಕ್ರಮವಾಗಿ ಅಳವಡಿಸಲಾಗಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ದೊಣ್ಣೆಕೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರಿಯಪ್ಪ (52) ವಿದ್ಯುತ್‌ ತಂತಿ ತುಳಿದು ಸಾವನ್ನಪ್ಪಿದ ವ್ಯಕ್ತಿ. 

ಈ ಸಂಬಂಧ ಯಗಟಿ ಠಾಣೆಯ ಪೊಲೀಸರು ಚಂದ್ರಪ್ಪ, ಕೆಂಚಪ್ಪ ಹಾಗೂ ಯದುಕುಮಾರ್ ಎಂಬ ಮೂವರು ಆರೋಪಿಗಳನ್ನು ಅರೆಸ್ಟ್‌ ಮಾಡಿದ್ದಾರೆ.

ಆರೋಪಿಗಳು ಕಾಡುಹಂದಿಗಳನ್ನು ಬೇಟೆಯಾಡಲು ಜಮೀನಿನಲ್ಲಿ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿದ್ದರು. ಜಮೀನಿನ ಕಡೆಗೆ ತೆರಳಿದ್ದ ಕರಿಯಪ್ಪ ಅವರು ಆಕಸ್ಮಿಕವಾಗಿ ಈ ವಿದ್ಯುತ್ ತಂತಿಯನ್ನು ತುಳಿದಿದ್ದು, ಶಾಕ್ ತಗಲಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕರಿಯಪ್ಪ ಮೃತಪಡುತ್ತಿದ್ದಂತೆಯೇ ಗಾಬರಿಗೊಂಡ ಆರೋಪಿಗಳು, ತಮ್ಮ ಕೃತ್ಯ ಎಲ್ಲಾದರೂ ಬಯಲಾಗಬಹುದೆಂಬ ಭಯದಿಂದ ಯಾರಿಗೂ ತಿಳಿಯದಂತೆ ಶವವನ್ನು ಜಮೀನಿನಲ್ಲಿಯೇ ಹೂತುಹಾಕಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದರು.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

ಮನೆಯಿಂದ ಹೋದ ಕರಿಯಪ್ಪ ಅವರು ಎಷ್ಟು ಸಮಯವಾದರೂ ವಾಪಸ್ ಬಾರದಿದ್ದಾಗ ಕಂಗಾಲಾದ ಕುಟುಂಬಸ್ಥರು ದೊಣ್ಣೆಕೋರನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದರು. ಎಲ್ಲೂ ಪತ್ತೆಯಾಗದಿದ್ದಾಗ ಅಂತಿಮವಾಗಿ ಯಗಟಿ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ದೂರು ದಾಖಲಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಯಗಟಿ ಪೊಲೀಸರು ತನಿಖೆ ಆರಂಭಿಸಿದರು. ಜಮೀನಿನ ಸಮೀಪದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕರಿಯಪ್ಪ ಅವರು ಆ ಮಾರ್ಗದಲ್ಲಿ ನಡೆದುಕೊಂಡು ಹೋಗಿರುವುದು ಕಂಡುಬಂದಿತ್ತು. ತದನಂತರ ಕೆಲವೇ ಗಂಟೆಗಳ ಅಂತರದಲ್ಲಿ ಮತ್ತೋರ್ವ ವ್ಯಕ್ತಿ ಅದೇ ಹಾದಿಯಲ್ಲಿ ಅನುಮಾನಾಸ್ಪದವಾಗಿ ಓಡಾಡಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಕೂಡಲೇ ಸಿಸಿಟಿವಿಯಲ್ಲಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ, ಭೀಕರ ಕೊಲೆ ಮತ್ತು ಶವ ಹೂತಿಟ್ಟಿರೋದು ತಿಳಿದಿದೆ.

Comments (0)

Your email address will not be published. Required fields are marked *

Back to top button