ರಾಜ್ಯ

ಪಂಜಾಬ್‌ನಲ್ಲಿರುವ BJP ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ!

Petrol bomb attack on BJP office in Punjab!

ಚಂಡೀಗಢ : ಪಂಜಾಬ್‌ನ ಸಂಗ್ರೂರ್‌ನಲ್ಲಿರುವ BJP ಕಚೇರಿಯ ಮೇಲೆ ನಿನ್ನೆ ತಡರಾತ್ರಿ ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿ, ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ನಿನ್ನೆ ತಡರಾತ್ರಿ ಈ ಕೃತ್ಯ ನಡೆದಿದ್ದು, ಸ್ಥಳೀಯರಿಂದ ಮಾಹಿತಿ ಲಭ್ಯವಾಗುತ್ತಿದ್ದಂತೆ ಸಂಗ್ರೂರ್ ಎಸ್‌ಪಿ-ಡಿ ದೇವಿಂದರ್ ಅತ್ರಿ ಅವರು ಡಿಎಸ್‌ಪಿ ಹಾಗೂ ಸಂಗ್ರೂರ್ ಎಸ್‌ಎಚ್‌ಒ ಅವರೊಂದಿಗೆ ಕೂಡಲೇ ಬಿಜೆಪಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ನಡೆದ ಪ್ರದೇಶದ ಸುತ್ತಮುತ್ತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಈ ದೃಶ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸುವ ಮೂಲಕ ದಾಳಿ ನಡೆಸಿದ ದುಷ್ಕರ್ಮಿಗಳನ್ನು ಗುರುತಿಸಲು ಹಾಗೂ ಅವರ ಉದ್ದೇಶವನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button