ರಾಜ್ಯ

ತಮಿಳುನಾಡಿಗೆ 3,000 ಕ್ಯೂಸೆಕ್‌ ನೀರು ಹರಿಸಲು CWRC ಆದೇಶ!

CWRC orders release of 3,000 cusecs of water to Tamil Nadu!

ಬೆಂಗಳೂರು : ಭೀಕರ ಬರಗಾಲದಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ನೆರೆಯ ರಾಜ್ಯ ತಮಿಳುನಾಡಿಗೆ ಪ್ರತಿದಿನ 3,000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಹತ್ವದ ಆದೇಶ ಹೊರಡಿಸಿದೆ.

ಪ್ರತಿ ದಿನ 3,000 ಕ್ಯೂಸೆಕ್‌ನಂತೆ 15 ದಿನಗಳ ಕಾಲ ಒಟ್ಟು 4 ಟಿಎಂಸಿ ಗಳಷ್ಟು ನೀರು ಹರಿಸಲು CWRC ಹೇಳಿದೆ. ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ಬಾರಿ ಮಳೆಯ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ. ಬೆಳೆಗಳಿಗೆ ಹರಿಸಲು ನೀರಿಲ್ಲದೆ ರೈತರು ಪರದಾಡುತ್ತಿದ್ದರೆ, ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಕುಡಿಯುವ ನೀರಿಗೇ ತೀವ್ರ ಅಭಾವ ಎದುರಾಗಿದೆ.

ಈ ಮಧ್ಯೆ ತಮಿಳುನಾಡಿಗೆ ಪ್ರತಿದಿನ 3,000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೂಚನೆ ನೀಡಿದೆ.

Comments (0)

Your email address will not be published. Required fields are marked *

Back to top button