ರಾಜಕೀಯ

ಕ್ಲೈಮ್ಯಾಕ್ಸ್ ಹಂತಕ್ಕೆ ಬಂದ ಸಚಿವ ಸಂಪುಟ ವಿಸ್ತರಣೆ ಕಸರತ್ತು!

Cabinet expansion exercise reaches a crucial stage!

ಬೆಂಗಳೂರು : ಡಿಕೆ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಇಂದು ರಾತ್ರಿ 8 ಗಂಟೆಗೆ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಹೈವೋಲ್ಟೇಜ್ ಮೀಟಿಂಗ್​​ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್, ಸುರ್ಜೆವಾಲಾ, ಕೆಸಿ ವೇಣುಗೋಪಾಲ್​ ಚರ್ಚೆ ನಡೆಸಲಿದ್ದಾರೆ. ಇಂದು ಅಥವಾ ನಾಳೆ ನೂತನ ಸಚಿವರ ಪಟ್ಟಿ ಅಂತಿಮಗೊಳ್ಳಲಿದ್ದು, ಗುರುವಾರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಇನ್ನು 30ಕ್ಕೂ ಹೆಚ್ಚು ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದು ಮಂತ್ರಿಗಿರಿಗಾಗಿ ಲಾಬಿ ನಡೆಸುತ್ತಿದ್ದಾರೆ.

ಮಂತ್ರಿ ಸ್ಥಾನದಲ್ಲಿರುವ ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ದೇವರ ಮೊರೆ ಹೋಗಿದ್ದಾರೆ. ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಚಿವ ಸ್ಥಾನಕ್ಕೆ ಇನ್ನೂ ರೇಟ್ ಫಿಕ್ಸ್ ಆಗಿಲ್ಲ ಎಂದು ಕಿಡಿಕಾರಿದ್ರು.

Comments (0)

Your email address will not be published. Required fields are marked *

Back to top button