ರಾಜ್ಯ
ಕಾವೇರಿ ಕಿಚ್ಚು – ರಾಜ್ಯಾದ್ಯಂತ ತೀವ್ರಗೊಂಡ ಪ್ರತಿಭಟನೆ!
Kaveri Kicchu - Intensified protests across the state!

ಬೆಂಗಳೂರು : ರಾಜ್ಯದಲ್ಲಿ ಮಳೆಯಿಲ್ಲದೆ ಹಳೆ ಮೈಸೂರು ಭಾಗದಲ್ಲಿ ಈಗಾಗಲೇ ಬರದಂತಹ ಪರಿಸ್ಥಿತಿ ತಲೆದೋರಿದ್ದು, ಕಾವೇರಿ ಕೊಳ್ಳದ ರೈತರಿಗೆ ಮತ್ತೊಮ್ಮೆ ಆತಂಕ ಎದುರಾಗಿದೆ. ಇದರ ಬೆನ್ನಲ್ಲೇ, ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಸೂಚನೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಸಿಲಿಕಾನ್ ಸಿಟಿಯಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ. ಮಲ್ಲೇಶ್ವರಂನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಸರ್ಕಾರದ ನಿರ್ಧಾರದ ವಿರುದ್ಧ ರಣಾಕ್ರೋಶ ಮೊಳಗಿಸಿದರು.
ಮಾಜಿ ಸಂಸದ ಶಿವರಾಮೇಗೌಡ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ತಮಿಳುನಾಡಿಗೆ ಹನಿ ನೀರನ್ನೂ ಬಿಡದಂತೆ ಕರವೇ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಆಕ್ರೋಶ ಬೆನ್ನಲ್ಲೇ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಬಿಎಂಟಿಸಿ ಬಸ್ನಲ್ಲಿ ಪ್ರತಿಭಟನಾಕಾರರ ಕರೆದೊಯ್ದಿದ್ದಾರೆ.




