ಜಿಲ್ಲೆ
ಚಾಮರಾಜನಗರ ಜಿಲ್ಲಾ ವ್ಯವಸ್ಥಾಪಕ ಕಚೇರಿ ಮೇಲೆ ಲೋಕಾ ದಾಳಿ – ಇಬ್ಬರು ಅಧಿಕಾರಿಗಳು ಲಾಕ್!
Lokayukta raids Chamarajanagar District Manager's office – two officials detained!

ಚಾಮರಾಜನಗರ : ಲಂಚ ಪಡೆಯುವಾಗ ಚಾಮರಾಜನಗರ ಜಿಲ್ಲಾ ವ್ಯವಸ್ಥಾಪಕರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಕಚೇರಿಯ
ಜಿಲ್ಲಾ ವ್ಯವಸ್ಥಾಪಕ ನಾಗೇಂದ್ರ ಮತ್ತು ಸರ್ವಮಂಗಳ ಲಾಕ್ ಆಗಿದ್ದಾರೆ.
ಮಹಮ್ಮದ್ ಜುಬೇರ್ ಎಂಬುವವರ ಬಳಿಯಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಂಚದ ಹಣದೊಂದಿಗೆ ಇಬ್ಬರೂ ಅಧಿಕಾರಿಗಳು ಸಿಕ್ಕಿಬಿದ್ದಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಚಾಮರಾಜನಗರ ಲೋಕಾಯುಕ್ತ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ಯಶಸ್ವಿಯಾಗಿ ನಡೆದಿದೆ.




