ರಾಜ್ಯ
ಕಾವೇರಿ ಕಿಚ್ಚು – ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ಕರೆ!
Cauvery Turmoil – Call for Karnataka Bandh on August 13!

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಹೊರಡಿಸಿರುವ ಆದೇಶವನ್ನು ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ತೀವ್ರಗೊಂಡಿದೆ. ತಮಿಳುನಾಡಿಗೆ ಹನಿ ನೀರನ್ನೂ ಹರಿಸದಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಆಗಸ್ಟ್ 13 ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದೆ.
ಆಗಸ್ಟ್ 13 ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಇರಲಿದೆ. ಬಂದ್‌ಗೆ ಕರೆ ನೀಡಿರುವ ಹೋರಾಟಗಾರ ವಾಟಾಳ್ ನಾಗರಾಜ್ ಅವರು ರಾಜ್ಯದ ಜನತೆಯಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.
ಕೈ ಮುಗಿದು ಕೇಳಿಕೊಳ್ಳುತ್ತೇನೆ, ದಯವಿಟ್ಟು ಈ ಬಂದ್ಗೆಯನ್ನು ಯಾರೂ ವಿರೋಧಿಸಬೇಡಿ. ಇದು ನಾಡಿನ ಉಳಿವಿಗಾಗಿ, ರೈತರ ಹಿತಾಸಕ್ಷಿಗಾಗಿ ನಡೆಯುತ್ತಿರುವ ಹೋರಾಟ. ಎಲ್ಲ ರೈತರು ಭಾಗವಹಿಸುವಂತೆ ವಾಟಾಳ್ ನಾಗರಾಜ್ ಕೇಳಿಕೊಂಡಿದ್ದಾರೆ.




