ರಾಜಕೀಯ

ಸಚಿವ ಸಂಪುಟ ವಿಸ್ತರಣೆ – ಇಂದು ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣವಚನ!

Cabinet Expansion – Swearing-in of new ministers today at 4 PM!

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಯ ಕಸರತ್ತಿಗೆ ಕೊನೆಗೂ ತೆರೆಬಿದ್ದಿದೆ. ಇಂದು ಸಂಜೆ 4 ಗಂಟೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಒಂದೆಡೆ ಕಾವೇರಿ ನದಿ ನೀರು ಹಂಚಿಕೆ ವಿವಾದ ಹಾಗೂ ಪ್ರವಾಹದ ಸಂಕಷ್ಟ ರಾಜ್ಯದಲ್ಲಿ ಸಾರ್ವಜನಿಕ ಮತ್ತು ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದ್ದರೆ, ಮತ್ತೊಂದೆಡೆ ದೆಹಲಿ ಮಟ್ಟದಲ್ಲಿ ನಡೆದ ಸರಣಿ ಸಭೆಗಳು ಹಾಗೂ ಸಂಪುಟ ವಿಸ್ತರಣೆಯ ಕಸರತ್ತುಗಳು ತೀವ್ರ ಕುತೂಹಲ ಕೆರಳಿಸಿದ್ದವು.

ಹೈಕಮಾಂಡ್ ಜೊತೆಗಿನ ಸಮಾಲೋಚನೆಯ ಬಳಿಕ ಅಂತಿಮವಾಗಿ ಸಂಪುಟ ಸೇರುವ ನೂತನ ಸಚಿವರ ಪಟ್ಟಿ ಈಗ ಹೊರಬಿದ್ದಿದೆ.

ಸಂಪುಟ ಸೇರಲಿರುವ ನೂತನ ಸಚಿವರ ಪಟ್ಟಿ :

  • ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್
  • ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ್​​​ ತಂಗಡಗಿ
  • ಜೇವರ್ಗಿ ಕ್ಷೇತ್ರದ ಶಾಸಕ ಡಾ.ಅಜಯ್ ಸಿಂಗ್
  • ಬಾಗಲಕೋಟೆ ಶಾಸಕ ವಿಜಯಾನಂದ ಕಾಶಪ್ಪನವರ್
  • ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ
  • ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ
  • ಮಾಗಡಿ ಕ್ಷೇತ್ರದ ಶಾಸಕ ಹೆಚ್.ಸಿ.ಬಾಲಕೃಷ್ಣ
  • ಕಲಘಟಗಿ ಕ್ಷೇತ್ರದ ಶಾಸಕ ಸಂತೋಷ್ ಲಾಡ್
  • ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್
  • ಚಾಮರಾಜನಗರ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ
  • ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ
  • ಮಾಯಕೊಂಡ ಕ್ಷೇತ್ರದ ಶಾಸಕ ಬಸವಂತಪ್ಪ
  • ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ
  • ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ.ನಾಗೇಂದ್ರ
  • ನರೇಂದ್ರ ಸ್ವಾಮಿ, ಮಂಕಾಳು ವೈದ್ಯ, ರುದ್ರಪ್ಪ ಲಮಾಣಿ
  • MLC ಗಾಯಿತ್ರಿ ಶಾಂತೇಗೌಡ

Comments (0)

Your email address will not be published. Required fields are marked *

Back to top button