ರಾಜಕೀಯ

ʻಕೈʼ​ ಪಾಳಯದಲ್ಲಿ ಬಂಡಾಯದ ರೋಷಾಗ್ನಿ – KPCC ಕಚೇರಿ ಎದುರು ಕಾರ್ಯಕರ್ತರ ಹೈಡ್ರಾಮಾ!

Furious rebellion in the 'Hand' camp – High drama by party workers outside the KPCC office!

ಬೆಂಗಳೂರು : ಸಚಿವ ಸಂಪುಟ ರಚನೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಕಿಚ್ಚು ಭುಗಿಲೆದ್ದಿದ್ದು, ಬೆಂಗಳೂರಿನ KPCC ಕಚೇರಿ ಎದುರು ಕಾಂಗ್ರೆಸ್‌ ಕಾರ್ಯಕರ್ತರ ಹೈಡ್ರಾಮಾ ನಡೆದಿದೆ.

ವಿಜಯನಗರ, ಗೋವಿಂದರಾಜನಗರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಾಸಕ ಎಂ.ಕೃಷ್ಣಪ್ಪ ಅವರ ಬೆಂಬಲಿಗರು ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಶಾಸಕ ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆರಳಿದ ಬೆಂಬಲಿಗರು ಹೈಕಮಾಂಡ್ ಹಾಗೂ ಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಚೇರಿ ಮುಂಭಾಗ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ರಾಜ್ಯಾದ್ಯಂತ ಭುಗಿಲೆದ್ದ ಅಸಮಾಧಾನದ ಕಿಚ್ಚು

ಬೆಂಗಳೂರು ಮಾತ್ರವಲ್ಲದೆ ಬೆಳಗಾವಿ, ಮೈಸೂರು, ಕಲಬುರಗಿ, ಚಿತ್ರದುರ್ಗ, ಧಾರವಾಡ ಹಾಗೂ ಹುಬ್ಬಳ್ಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಚಿವ ಸ್ಥಾನ ವಂಚಿತರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮೈಸೂರಿನಲ್ಲಿ ತನ್ವೀರ್ ಸೇಠ್, ಕಲಬುರಗಿಯಲ್ಲಿ R.B.ತಿಮ್ಮಾಪುರ್, ಮೊಳಕಾಲ್ಮೂರಿನಲ್ಲಿ N.Y.ಗೋಪಾಲಕೃಷ್ಣ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕೈಯಲ್ಲಿ ವಿಷದ ಬಾಟಲಿ ಹಿಡಿದು, ರಸ್ತೆಯಲ್ಲಿ ಟೈಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Comments (0)

Your email address will not be published. Required fields are marked *

Back to top button