New delhi

ಏರ್ ಇಂಡಿಯಾ ವಿಮಾನ 300 ಅಡಿ ಕುಸಿತ – 12 ಜನರಿಗೆ ಗಾಯ!

Air India flight drops 300 feet – 12 injured!

ನವದೆಹಲಿ : ಫುಕೆಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನ ಇಂದು ಮಧ್ಯಾಕಾಶದಲ್ಲಿ ತೀವ್ರ ಟರ್ಬುಲೆನ್ಸ್‌ಗೆ ಸಿಲುಕಿದ ಪರಿಣಾಮ, ದಿಢೀರ್ ಸುಮಾರು 300 ಅಡಿಗಳಷ್ಟು ಕೆಳಗೆ ಕುಸಿದ ಘಟನೆ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಸಿಬ್ಬಂದಿ ಸೇರಿದಂತೆ ಒಟ್ಟು 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

AI2379 ವಿಮಾನವು ಬೆಳಿಗ್ಗೆ 8:25ಕ್ಕೆ ಫುಕೆಟ್‌ನಿಂದ ಹೊರಟಿದ್ದು, ಮಧ್ಯಾಹ್ನ 11:50ಕ್ಕೆ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ. 

ಏರ್ ಇಂಡಿಯಾ AI2379 ವಿಮಾನವು ಫುಕೆಟ್‌ನಿಂದ ಎಂದಿನಂತೆ ಹೊರಟು ದೆಹಲಿಯತ್ತ ಸಾಗುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕ್ಲಿಯರ್ ಏರ್ ಟರ್ಬುಲೆನ್ಸ್‌ಗೆ ಸಿಲುಕಿಕೊಂಡಿದೆ. ಹಾರಾಟದ ಮಧ್ಯೆ ವಿಮಾನವು ಏಕಾಏಕಿ ಸುಮಾರು 300 ಅಡಿಗಳಷ್ಟು ಕೆಳಗೆ ಕುಸಿದಿದೆ. ಟರ್ಬುಲೆನ್ಸ್‌ನ ತೀವ್ರತೆಗೆ ವಿಮಾನದಲ್ಲಿದ್ದ ಕೆಲ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ವಿಮಾನವು ಸುರಕ್ಷಿತವಾಗಿ ಇಳಿದ ಬಳಿಕ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಯಾವುದೇ ತೊಂದರೆಯಿಲ್ಲದೆ ವಿಮಾನದಿಂದ ಹೊರಬಂದರು. ವೈದ್ಯಕೀಯ ತಪಾಸಣೆಯ ಅಗತ್ಯವಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ತಕ್ಷಣವೇ ವಿಮಾನ ನಿಲ್ದಾಣದ ಅಂಬುಲೆನ್ಸ್ ಹಾಗೂ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ದು ಪರೀಕ್ಷೆ ನಡೆಸಲಾಗಿದೆ. 

Comments (0)

Your email address will not be published. Required fields are marked *

Back to top button