ಜಿಲ್ಲೆ

ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್‌!

Yashavantarayagouda Patil withdraws resignation!

ವಿಜಯಪುರ : ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರು ಇದೀಗ ಹಿಂಪಡೆದಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಂಡಾಯವೆದ್ದ ಯಶವಂತರಾಯ ಗೌಡ ಪಾಟೀಲ್ ಅವರು ರಾಜೀನಾಮೆ ನೀಡಿದ್ದರು. ಇದೀಗ ರಾಜೀನಾಮೆ ಪತ್ರ ವಾಪಸ್ ಪಡೆಯುವ ಬಗ್ಗೆ ವಿಧಾನಸಭೆ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಿಜಯಪುರದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ಅಧಿಕೃತವಾಗಿ ವಾಪಸ್ ಪಡೆದಿದ್ದಾರೆ. ಹೈಕಮಾಂಡ್ ನಾಯಕರು ಮತ್ತು ಮುಖ್ಯಮಂತ್ರಿಯವರ ಮನವೊಲಿಕೆಯ ಬಳಿಕ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಅಸಮಾಧಾನಗೊಂಡು ರಾಜೀನಾಮೆ ಅಸ್ತ್ರ ಪ್ರಯೋಗಿಸಿದ್ದ ಯಶವಂತರಾಯಗೌಡ ಪಾಟೀಲ್ ಅವರೊಂದಿಗೆ ಪಕ್ಷದ ಹಿರಿಯ ನಾಯಕರು ಮತ್ತು ಮುಖ್ಯಮಂತ್ರಿಗಳು ಮಾತುಕತೆ ನಡೆಸಿ, ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡುವ ಮೂಲಕ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

Comments (0)

Your email address will not be published. Required fields are marked *

Back to top button