ರಾಜಕೀಯ
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ!
Basavaraja resigns as chairman of Vidhan Parishad!

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆಯನ್ನು ಅಧಿಕೃತವಾಗಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ಮುಖಂಡರ ಸುದೀರ್ಘ ಮನವೊಲಿಕೆಯ ಬಳಿಕ ಅವರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಈ ಮೊದಲು ಮುಂಗಾರು ಅಧಿವೇಶನ ಆರಂಭವಾದ ಬಳಿಕ, ಅಂದರೆ ಆಗಸ್ಟ್ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನಿಸಿದ್ದರು. ಆದರೆ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜೀನಾಮೆ ಪ್ರಕ್ರಿಯೆ ತುಸು ಮುಂಚಿತವಾಗಿಯೇ ನಡೆದಿದೆ.
ತಮ್ಮ ರಾಜೀನಾಮೆ ಪತ್ರದಲ್ಲಿ ಈ ಕುರಿತು ಸ್ಪಷ್ಟನೆ ನೀಡಿರುವ ಅವರು, ಯಾವುದೇ ಒತ್ತಡವಿಲ್ಲದೆ, ಸಂಪೂರ್ಣ ಸ್ವಇಚ್ಛೆಯಿಂದಲೇ ತಾನು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.
ನೂತನ ಸಭಾಪತಿಗಳು ಅಧಿಕೃತವಾಗಿ ಆಯ್ಕೆಯಾಗುವವರೆಗೆ ಬಸವರಾಜ ಹೊರಟ್ಟಿ ಅವರೇ ಹಂಗಾಮಿ ಸಭಾಪತಿಯಾಗಿ ಮುಂದುವರಿಯಲಿದ್ದಾರೆ ಮತ್ತು ಸದನದ ಕಲಾಪಗಳ ನಿರ್ವಹಣೆಯನ್ನು ನೋಡಿಕೊಳ್ಳಲಿದ್ದಾರೆ.




