ದೇಶ/ವಿದೇಶ

ಮತ್ತೆ ಜನ ಸಾಮಾನ್ಯರ ಜೇಬಿಗೆ ಕತ್ತರಿ – ಎಲೆಕ್ಟ್ರಾನಿಕ್ಸ್ & ಮೊಬೈಲ್ ಉತ್ಪನ್ನಗಳ ಬೆಲೆ ಏರಿಕೆ!

Cuts into the pockets of the common man again - prices of electronics & mobile products increase!

ಬೆಂಗಳೂರು: ದೇಶದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಹಬ್ಬದ ಸೀಸನ್ ಸಮೀಪಿಸುತ್ತಿರುವ ಬೆನ್ನಲ್ಲೇ, ಎಲೆಕ್ಟ್ರಾನಿಕ್ಸ್ ಮತ್ತು ಮೊಬೈಲ್ ಉತ್ಪನ್ನಗಳ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುವುದು ಖಚಿತವಾಗಿದೆ.

ಮಾರುಕಟ್ಟೆಯಲ್ಲಿ ವಿವಿಧ ಎಲೆಕ್ಟ್ರಾನಿಕ್ ವಸ್ತುಗಳ ದರ ಒಟ್ಟಾರೆಯಾಗಿ ಶೇಕಡಾ 5 ರಿಂದ 15ರಷ್ಟು ಹೆಚ್ಚಳ ಕಂಡಿದೆ. ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌, ಸ್ಮಾರ್ಟ್‌ ಟಿವಿ, ರೆಫ್ರಿಜರೇಟರ್‌ ಹಾಗೂ ಏರ್‌ಕಂಡೀಷನರ್‌ಗಳ (ಎಸಿ) ಬೆಲೆಯಲ್ಲಿ ಏರಿಕೆಯಾಗಿದೆ. ವಿಶೇಷವಾಗಿ ಸ್ಮಾರ್ಟ್‌ಫೋನ್‌ಗಳ ಬೆಲೆಯು ಶೇಕಡಾ 10 ರಿಂದ 15ರವರೆಗೆ ದುಬಾರಿಯಾಗಲಿದೆ.

ಎಲೆಕ್ಟ್ರಾನಿಕ್ಸ್ ಉಪಕರಣಗಳ ತಯಾರಿಕೆಗೆ ಅಗತ್ಯವಿರುವ ಸೆಮಿಕಂಡಕ್ಟರ್‌ಗಳು, ಲಿಥಿಯಂ ಮತ್ತು ಇತರ ಪ್ರಮುಖ ಕಚ್ಚಾ ವಸ್ತುಗಳ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಾಗಿದೆ. ಸಾಗಣೆ ಮತ್ತು ಇಂಧನ ವೆಚ್ಚ ಹೆಚ್ಚಾಗಿರುವುದರಿಂದ ಉತ್ಪನ್ನಗಳನ್ನು ಮಾರುಕಟ್ಟೆಗೆ ತಲುಪಿಸುವ ಖರ್ಚು ದುಪ್ಪಟ್ಟಾಗಿದೆ. ಹಾಗಾಗಿ ಎಲೆಕ್ಟ್ರಾನಿಕ್ಸ್ ಮತ್ತು ಮೊಬೈಲ್ ಉತ್ಪನ್ನಗಳ ಬೆಲೆ ಏರಿಕೆಯಾಗಿದೆ.

Comments (0)

Your email address will not be published. Required fields are marked *

Back to top button