ಸಿನಿಮಾ

ಇಂದು ʻಟಾಕ್ಸಿಕ್ʼ ಟ್ರೈಲರ್ ರಿಲೀಸ್‌ – ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

Toxic trailer releases today - Yash's new look is drawing more attention!

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ʻಟಾಕ್ಸಿಕ್’ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಯಾಗಲಿದೆ. ಈ ಮೂಲಕ ಚಿತ್ರತಂಡ ಅಭಿಮಾನಿಗಳಲ್ಲಿ ಸಿನಿಮಾದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಚಿತ್ರದ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡಿರುವ ಚಿತ್ರತಂಡ, ಭಾರೀ ಸ್ಪೋಟ ಮತ್ತು ಬೆಂಕಿಯ ನಡುವೆ ಮಾಸ್ ಹಾಗೂ ಸ್ಟೈಲಿಶ್ ಲುಕ್‌ನಲ್ಲಿ ಯಶ್ ನುಗ್ಗುತ್ತಿರುವ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ. ಅಲ್ಲದೆ, ಪೋಸ್ಟರ್‌ನಲ್ಲಿ ‘TRAILER 7:01 PM’ ಎಂದು ಬರೆಯಲಾಗಿದೆ. ಈ ಮೂಲಕ ಚಿತ್ರತಂಡ ಅಧಿಕೃತವಾಗಿ ಸಿನಿಮಾದ ಟ್ರೈಲರ್ ಬಿಡುಗಡೆ ಸಮಯ ಶೇರ್‌ ಮಾಡಿಕೊಂಡಿದೆ. 

ನಿರ್ದೇಶಕಿ ಗೀತು ಮೋಹನ್‌ದಾಸ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಯಶ್ ಅವರು ರಾಯ್ ಮತ್ತು ಟಿಕೆಟ್ ಎಂಬ ಎರಡು ಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಚಿತ್ರದಲ್ಲಿ ಯಶ್ ಜೊತೆಗೆ ತಾರಾಗಣ ದಂಡೇ ಇದೆ. ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಈ ಸಿನಿಮಾವನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಚಿತ್ರೀಕರಿಸಲಾಗಿದೆ. ಬಳಿಕ ಇದನ್ನು ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಿಗೂ ಡಬ್ ಮಾಡಿ ವಿಶ್ವದಾದ್ಯಂತ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ.

ಇಂದು ಸಂಜೆ 7:01ಕ್ಕೆ ಬಿಡುಗಡೆಯಾಗಲಿರುವ ಟ್ರೈಲರ್ ಬಾಕ್ಆಫೀಸ್‌ನಲ್ಲಿ ಯಾವ ರೀತಿಯ ಹೊಸ ದಾಖಲೆಗಳನ್ನು ಸೃಷ್ಟಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

Comments (0)

Your email address will not be published. Required fields are marked *

Back to top button