ರಾಜ್ಯ

ರಾಂಚಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ – ಜಾರ್ಖಂಡ್ ಬಂದ್‌ಗೆ BJP ಕರೆ!

Lathi charge on students in Ranchi - BJP calls for Jharkhand bandh!

ರಾಂಚಿ : ಜಾರ್ಖಂಡ್‌ನಲ್ಲಿ JPSC, JSSC ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ರಾಂಚಿಯಲ್ಲಿ ನಡೆದ ಪೊಲೀಸ್ ಲಾಠಿ ಚಾರ್ಜ್‌ನ್ನು ಖಂಡಿಸಿ, ಬಿಜೆಪಿ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದೆ.

ವಿಧಾನಸಭೆ ಮುತ್ತಿಗೆಗೆ ಯತ್ನಿಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಲ್ಲದೆ, ಜಲಫಿರಂಗಿ ಬಳಸಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

JPSC ಮತ್ತು JSSC ಪರೀಕ್ಷೆಗಳಲ್ಲಿನ ವ್ಯಾಪಕ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಹಲವು ದಿನಗಳಿಂದ ಸತತ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ವಿದ್ಯಾರ್ಥಿಗಳು ರಾಂಚಿಯಲ್ಲಿ ವಿಧಾನಸಭೆಯತ್ತ ಬೃಹತ್ ಮೆರವಣಿಗೆ ನಡೆಸಿದರು. ಈ ವೇಳೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ವಿದ್ಯಾರ್ಥಿಗಳನ್ನು ತಡೆಯಲು ಯತ್ನಿಸಿದರು.

ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಗುಂಪನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ಇದನ್ನು ಖಂಡಿಸಿ ಬಿಜೆಪಿ ಬಂದ್‌ಗೆ ಕರೆ ನೀಡಿದೆ.

ಬಿಜೆಪಿ ಮುಖಂಡ ಹಾಗೂ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಅವರು ಪೊಲೀಸರ ಈ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಜಾರ್ಖಂಡ್‌ನಲ್ಲಿ ಇಂತಹ ದಬ್ಬಾಳಿಕೆಯ ಆಡಳಿತ ನಡೆಸುತ್ತಿರುವ ಹೇಮಂತ್ ಸೊರೇನ್ ಸರ್ಕಾರಕ್ಕೆ ಮೈತ್ರಿಕೂಟದಲ್ಲಿರುವ ಕಾಂಗ್ರೆಸ್ ಪಕ್ಷ ಕೂಡಲೇ ತನ್ನ ಬೆಂಬಲವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

Comments (0)

Your email address will not be published. Required fields are marked *

Back to top button