ರಾಜಕೀಯ

ವಿಧಾನಮಂಡಲ ಅಧಿವೇಶನ ಆರಂಭ – ಸರ್ಕಾರದ ವಿರುದ್ಧ ಸಮರ ಸಾರಲು ದೋಸ್ತಿ ನಾಯಕರು ಸಜ್ಜು!

Legislature session begins – Coalition leaders gear up to wage a battle against the government!

ಬೆಂಗಳೂರು : ವಿಧಾನಮಂಡಲದ ಅಧಿವೇಶನವು ಇಂದಿನಿಂದ ಆರಂಭಗೊಂಡಿದ್ದು, ಆಗಸ್ಟ್ 27ರವರೆಗೆ ನಡೆಯಲಿದೆ. ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಲು ವಿರೋಧ ಪಕ್ಷದ ನಾಯಕರು ಸಜ್ಜಾಗಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊದಲ ಕಲಾಪ ಇದಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಅಧಿವೇಶನದ ಮೊದಲ ದಿನವಾದ ಇಂದು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುತ್ತಿದ್ದು, ನಾಳೆಯಿಂದ ಸದನದಲ್ಲಿ ಚರ್ಚೆಗಳು ಹಾಗೂ ರಾಜಕೀಯ ಸದ್ದುಗದ್ದಲಗಳು ಹೆಚ್ಚಾಗುವ ಸಾಧ್ಯತೆಯಿದೆ.

ಸಚಿವ ನಾಗೇಂದ್ರ ಅವರಿಗೆ ಸ್ಥಾನ ನೀಡಿರುವುದನ್ನು ಖಂಡಿಸಿ ಬಿಜೆಪಿ ಈಗಾಗಲೇ ಪ್ರತಿಭಟನೆಗೆ ಸಿದ್ಧತೆ ನಡೆಸಿದೆ. ಸರ್ಕಾರದ ಆಡಳಿತ ವೈಖರಿಯನ್ನು ಟೀಕಿಸಿ ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಶಾಸಕರು ಸಿದ್ಧತೆ ಮಾಡಿಕೊಂಡಿದ್ದರೆ, ಇದಕ್ಕೆ ಸಮರ್ಥವಾಗಿ ತಿರುಗೇಟು ನೀಡಲು ಆಡಳಿತ ಪಕ್ಷದ ವತಿಯಿಂದಲೂ ರಣತಂತ್ರಗಳನ್ನು ರೂಪಿಸಲಾಗಿದೆ.

ಇದಲ್ಲದೆ, ನಾಳೆ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಇಂದು ಮಧ್ಯಾಹ್ನದೊಳಗೆ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ.

Comments (0)

Your email address will not be published. Required fields are marked *

Back to top button