
ಚೆನ್ನೈ : ತಮಿಳುನಾಡು ಸಿಎಂ ಜೋಸೆಫ್ ವಿಜಯ್ ರಾಜ್ಯದ ಜನತೆಗೆ ಬಂಪರ್ ಗಿಫ್ಟ್ ನೀಡಿದ್ದು, ಮುಖ್ಯಮಂತ್ರಿಗಳ ಸಮಗ್ರ ಆರೋಗ್ಯ ವಿಮಾ ಯೋಜನೆಯಡಿ ವಾರ್ಷಿಕ ವಿಮಾ ಮೊತ್ತವನ್ನು 5 ಲಕ್ಷ ರೂ.ಗಳಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.
ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ, ವ್ಯಕ್ತಿಯ ಆದಾಯ ಅಥವಾ ವಾಸಿಸುವ ಸ್ಥಳವನ್ನು ಲೆಕ್ಕಿಸದೆ ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ರಕ್ಷಣೆ ದೊರೆಯುವಂತೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ತಮಿಳುನಾಡಿನ ಮಹಿಳಾ ಸರ್ಕಾರಿ ನೌಕರರಿಗೂ ಸರ್ಕಾರ ಗುಡ್‌ನ್ಯೂಸ್ ನೀಡಿದ್ದು, ಮೂರನೇ ಮಗುವಿನ ಹೆರಿಗೆ ರಜೆಯನ್ನು ಬರೋಬ್ಬರಿ 12 ವಾರಗಳಿಂದ 365 ದಿನಗಳಿಗೆ (1 ವರ್ಷ) ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ಇನ್ನು, ತಮಿಳುನಾಡು ಶಾಸಕರಿಗೆ ಕಾರು, ಇಂಧನ ಭತ್ಯೆ, ಕಾರ್ಯದರ್ಶಿ ವ್ಯವಸ್ಥೆ ಸಿಗಲಿದೆ. ಶಾಸಕರು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲಸಗಳಿಗೆ ಸಹಾಯವಾಗಲೆಂದು ಸರ್ಕಾರಿ ವಾಹನ ನೀಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.




