bengaluru

ರಾಜ್ಯಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ – ಗಗನಕ್ಕೇರಿದ ಹೂ-ಹಣ್ಣುಗಳ ಬೆಲೆ!

Varamahalakshmi festival celebrations across the state – prices of flowers and fruits skyrocket!

ಬೆಂಗಳೂರು : ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆಮಾಡಿದೆ. ಶ್ರಾವಣ ಮಾಸದ ಈ ವಿಶೇಷ ಹಬ್ಬದ ನಿಮಿತ್ತ ಮನೆ-ಮನೆಗಳಲ್ಲಿ ಪೂಜೆಗೆ ಭರ್ಜರಿ ಸಿದ್ಧತೆಗಳು ನಡೆದಿವೆ. ಹಬ್ಬದ ಖರೀದಿಗಾಗಿ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜನಸಾಗರವೇ ಹರಿದುಬಂದಿದೆ.

ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹಬ್ಬದ ಕಳೆ ಕಳೆಗಟ್ಟಿದೆ. ಹೂವು, ಹಣ್ಣುಗಳ ಖರೀದಿಗೆ ಮಹಿಳೆಯರು ಮುಗಿಬಿದ್ದಿದ್ದು, ಬೇಡಿಕೆ ಹೆಚ್ಚಿರುವ ಕಾರಣ ಮಾರುಕಟ್ಟೆಯಲ್ಲಿ ಹೂವಿನ ಬೆಲೆ ಸಾವಿರದ ಗಡಿ ದಾಟಿದೆ. ಇನ್ನು ಹಣ್ಣುಗಳ ಬೆಲೆಯಲ್ಲೂ ಕೊಂಚ ಏರಿಕೆಯಾಗಿದ್ದು, ಸೇಬು ಹಣ್ಣಿನ ಬೆಲೆ 200 ರಿಂದ 250 ರೂಪಾಯಿವರೆಗೆ ತಲುಪಿದೆ.

ಉಳಿದ ಹಣ್ಣುಗಳ ಬೆಲೆಯೂ ಕೂಡ ಪ್ರತಿ ಕೆಜಿಗೆ 10 ರಿಂದ 20 ರೂಪಾಯಿವರೆಗೆ ಹೆಚ್ಚಾಗಿದೆ. ಗುಲಾಬಿ, ಸೇವಂತಿಗೆ, ಕನಕಾಂಬರ ಮತ್ತು ಮಲ್ಲಿಗೆ ಹೂವುಗಳ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದೆ.

ಕೋಲಾರದಲ್ಲಿಯೂ ಹಬ್ಬದ ಖರೀದಿ ಭರಾಟೆ ಜೋರಾಗಿದೆ. ಮಾರುಕಟ್ಟೆಯಲ್ಲಿ ಹೂವು-ಹಣ್ಣು ಸೇರಿದಂತೆ ವಿವಿದ ವಸ್ತುಗಳ ಖರೀದಿಗೆ ಮಹಿಳೆಯರು ಮುಗಿಬಿದ್ದಿದ್ದಾರೆ. ಮಾರುಕಟ್ಟೆಯಲ್ಲಿ ಹೂವಿನ ಬೆಲೆ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಕೋಲಾರ ಮಾರುಕಟ್ಟೆಯಲ್ಲಿ ಒಂದು ಕೆಜಿ ಕನಕಾಂಬರ ಹೂವಿನ ಬೆಲೆ ಬರೋಬ್ಬರಿ 4,000 ರೂಪಾಯಿ ತಲುಪಿದ್ದರೆ, ಮಲ್ಲಿಗೆ ಹೂವು 3,000 ರೂಪಾಯಿಗೆ ಮಾರಾಟವಾಗುತ್ತಿದೆ.

Comments (0)

Your email address will not be published. Required fields are marked *

Back to top button