ಸಿನಿಮಾ

ಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ ವಿಧಿವಶ!

Veteran actress and Padma Shri awardee Sowcar Janaki passes away!

ದಕ್ಷಿಣ ಭಾರತೀಯ ಚಿತ್ರರಂಗದ ಹಿರಿಯ ನಟಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಹುಕಾರ್ ಜಾನಕಿ (94) ಅವರು ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಸಾಹುಕಾರ್ ಜಾನಕಿ ಇಂದು ಮಧ್ಯಾಹ್ನ ಚೆನ್ನೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

1931ರ ಡಿಸೆಂಬರ್ 12ರಂದು ಸಾಂಪ್ರದಾಯಿಕ ಕನ್ನಡ ಕುಟುಂಬದಲ್ಲಿ ಜನಿಸಿದ ಸಾಹುಕಾರ್ ಜಾನಕಿ ಅವರನ್ನು ದಕ್ಷಿಣ ಭಾರತೀಯ ಚಿತ್ರರಂಗದ ಅತ್ಯಂತ ಗೌರವಾನ್ವಿತ ಹಾಗೂ ಪ್ರತಿಭಾವಂತ ನಟಿಯರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ತಮ್ಮ ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ ಅವರು ನಟನಾ ಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ.

ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಸೇರಿದಂತೆ ವಿವಿಧ ಭಾಷೆಗಳ 450ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಕೇವಲ ಸಿನಿಮಾಗಳಷ್ಟೇ ಅಲ್ಲದೆ, 300ಕ್ಕೂ ಹೆಚ್ಚು ರಂಗ ನಾಟಕಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಕಲಾ ಲೋಕಕ್ಕೆ ತಮ್ಮನ್ನು ಸಂಪೂರ್ಣವಾಗಿ ಸಮರ್ಪಿಸಿಕೊಂಡಿದ್ದರು.

ಸಿನಿಮಾರಂಗಕ್ಕೆ ಅವರು ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಭಾರತ ಸರ್ಕಾರವು ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರ ನಿಧನಕ್ಕೆ ದಕ್ಷಿಣ ಭಾರತದ ಚಿತ್ರರಂಗದ ಗಣ್ಯರು, ಕಲಾವಿದರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.‌

Comments (0)

Your email address will not be published. Required fields are marked *

Back to top button