‘ಟಾಕ್ಸಿಕ್’ ಪ್ರೀ-ರಿಲೀಸ್ ಈವೆಂಟ್ನಲ್ಲಿ ದುರಂತ – ಇಬ್ಬರು ವಿದ್ಯಾರ್ಥಿಗಳಿಗೆ ಗಾಯ!
Tragedy at 'Toxic' pre-release event – two students injured!

ಹೈದರಾಬಾದ್ : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಪ್ರಿ-ರಿಲೀಸ್ ಕಾರ್ಯಕ್ರಮದಲ್ಲಿ ಭಾರೀ ಅಪಘಾತವೊಂದು ಸಂಭವಿಸಿದೆ. ಹೈದರಾಬಾದ್ನ ಮಲ್ಲಾ ರೆಡ್ಡಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೌಂಡ್ ಸಿಸ್ಟಮ್ ಮತ್ತು ಲೈಟಿಂಗ್ ಸ್ಟ್ರಕ್ಚರ್ ಬಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೈದರಾಬಾದ್ನಲ್ಲಿ ಆಯೋಜಿಸಲಾಗಿದ್ದ ‘ಟಾಕ್ಸಿಕ್’ ಚಿತ್ರದ ಪ್ರೀ-ರಿಲೀಸ್ ಈವೆಂಟ್ಗೆ ಯಶ್ ಅವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಭಾರಿ ಜನದಟ್ಟಣೆಯಿಂದಾಗಿ ಇದ್ದಕ್ಕಿದ್ದಂತೆ ಬೃಹತ್ ಸೌಂಡ್ ಸಿಸ್ಟಮ್ ಮತ್ತು ಲೈಟಿಂಗ್ ಅಳವಡಿಸಿದ್ದ ಸ್ಟ್ರಕ್ಚರ್ ಜನಸಂದಣಿಯ ಮೇಲೆಯೇ ಕುಸಿದುಬಿದ್ದಿದೆ.
ಈ ದುರ್ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ತೀವ್ರ ಪೆಟ್ಟಾಗಿದ್ದು, ಓರ್ವ ವಿದ್ಯಾರ್ಥಿನಿ ಆಘಾತದಿಂದ ಪ್ರಜ್ಞೆತಪ್ಪಿ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಕೂಡಲೇ ಎಚ್ಚೆತ್ತ ಪೊಲೀಸರು ಮತ್ತು ಆಯೋಜಕರು ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
ಅವಘಡ ಸಂಭವಿಸುತ್ತಿದ್ದಂತೆ ವೇದಿಕೆಯಲ್ಲಿದ್ದ ಯಶ್ ಮಾತನ್ನು ನಿಲ್ಲಿಸಿ ಪರಿಸ್ಥಿತಿಯನ್ನು ಗಮನಿಸಿದರು. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಆರೋಗ್ಯದ ಬಗ್ಗೆ ವಿಚಾರಿಸಿದ ಅವರು, ಗಾಯಗೊಂಡವರಿಗೆ ತಕ್ಷಣ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳುವಂತೆ ಸೂಚಿಸಿದರು.




