ಕ್ರೈಂ ಸ್ಟೋರಿ

ಮೆಜೆಸ್ಟಿಕ್​ನಲ್ಲಿ ಮಂಗಳಮುಖಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್‌!

Brutal murder of a transgender person at Majestic!

ಬೆಂಗಳೂರು : ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಂಗಳಮುಖಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕಳೆದ ರಾತ್ರಿ 3 ಗಂಟೆ ಸುಮಾರಿಗೆ ಚಾಕುವಿನಿಂದ ಕತ್ತು ಸೀಳಿ ಕೊಲೆಗೈದಿದ್ದಾರೆ.

ಮೃತರನ್ನು ದೇವಿ(27) ಎಂದು ಗುರುತಿಸಲಾಗಿದೆ. ಆರೋಪಿ ಗೌತಮ್ ಮದ್ಯಪಾನ ಮಾಡಿ ದರೋಡೆ ನಡೆಸುವ ಉದ್ದೇಶದಿಂದ ಸ್ಥಳಕ್ಕೆ ಬಂದಿದ್ದು, ಹಣ ನೀಡಲು ನಿರಾಕರಿಸಿದಾಗ ಡ್ರ್ಯಾಗರ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.

ವಿಕ್ಟೋರಿಯಾ ಆಸ್ಪತ್ರೆಗೆ ಮಂಗಳಮುಖಿಯ ಮೃತದೇಹ ಶಿಫ್ಟ್ ಮಾಡಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು, ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button