ರಾಜಕೀಯ
ಸಿಎಂ ಡಿಕೆಶಿ ಭೇಟಿಯಾದ ಉದ್ಯಮಿ ಗೌತಮ್ ಅದಾನಿ – ಮಹತ್ವದ ಚರ್ಚೆ!
Businessman Gautam Adani meets CM DKSH – Significant discussion!

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಖ್ಯಾತ ಉದ್ಯಮಿ ಗೌತಮ್ ಅದಾನಿ ಭೇಟಿಯಾಗಿದ್ದಾರೆ. ಅದಾನಿ ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗೌತಮ್ ಅದಾನಿ ಅವರು, ಏರ್‌ಪೋರ್ಟ್ ವಾಪಸ್ಸಾಗುವಾಗ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿರುವುದು ರಾಜಕೀಯ ಮತ್ತು ಉದ್ಯಮ ವಲಯದಲ್ಲಿ ಕುತೂಹಲ ಮೂಡಿಸಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಇವರ ನಡುವೆ ಮಾತುಕತೆ ನಡೆದಿದೆ.
ಸೌಜನ್ಯದ ಭೇಟಿ ಎಂದು ಸಿಎಂ ಕಚೇರಿಯ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಹೊಸ ಉದ್ದಿಮೆಗಳ ಸ್ಥಾಪನೆ ಸಂಬಂಧ ಚರ್ಚೆ ನಡೆಸಿರುವ ಸಾಧ್ಯತೆಯಿದೆ.




