ರಾಜಕೀಯ

ನಾಗೇಂದ್ರ ರಾಜೀನಾಮೆಗೆ ಆಗ್ರಹ – ಉಭಯ ಸದನದಲ್ಲಿ ಬಿಜೆಪಿ ಪ್ರತಿಭಟನೆ!

Demand for Nagendra's resignation – BJP protests in both Houses!

ಬೆಂಗಳೂರು : ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ- ಜೆಡಿಎಸ್ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಇಂದು ವಿಧಾನಮಂಡಲ ಉಭಯ ಸದನಗಳ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಬಿಜೆಪಿ-ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಸಚಿವ ಸ್ಥಾನಕ್ಕೆ ಬಿ.ನಾಗಂದ್ರ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಿಸಲ್ಲ ಎಂದು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ವಿಪಕ್ಷ ಸದಸ್ಯರನ್ನು ಸಚಿವರಾದ ಶಿವಲಿಂಗೇಗೌಡ ಮತ್ತು ಕೃಷ್ಣಬೈರೇಗೌಡ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಬರಗಾಲ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಚರ್ಚೆಗೆ ಬರುವಂತೆ ಸಚಿವರು ವಿಪಕ್ಷಗಳಿಗೆ ಸವಾಲು ಹಾಕಿದರು. ಪ್ರತಿಭಟನೆ ಮುಂದುವರಿಸಿರುವ ವಿಪಕ್ಷ ನಾಯಕ ಆರ್. ಅಶೋಕ್ ಅವರು ತಮ್ಮ ಬೇಡಿಕೆ ಈಡೇರುವವರೆಗೆ ಅಹೋರಾತ್ರಿ ಧರಣಿ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಕುಣಿಗಲ್ ಶಾಸಕ ರಂಗನಾಥ್ ಅವರು ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಬಂದು, ತಮ್ಮ ತಾಲೂಕಿನ ಸಮಸ್ಯೆಗಳ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Comments (0)

Your email address will not be published. Required fields are marked *

Back to top button