ರಾಜ್ಯ

ಕರ್ನಾಟಕಕ್ಕೆ ಮತ್ತೆ ಶಾಕ್‌ – ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಸೂಚನೆ!

Another shock for Karnataka – CWRC directs release of 9,000 cusecs of water to Tamil Nadu!

ಬೆಂಗಳೂರು : ರಾಜ್ಯಕ್ಕೆ ಮತ್ತೊಮ್ಮೆ ಕಾವೇರಿ ನೀರಿನ ಸಂಕಷ್ಟ ಎದುರಾಗಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 9,000 ಕ್ಯೂಸೆಕ್ ನೀರನ್ನು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ಹೊರಡಿಸಿದೆ.

ಇಂದು ನಡೆದ CWRC ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಆರಂಭದಲ್ಲಿ 12,000 ಕ್ಯೂಸೆಕ್ ನೀರು ಬಿಡುವಂತೆ ಕೇಳಲಾಗಿದ್ದರೂ, ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಅದನ್ನು 9,000 ಕ್ಯೂಸೆಕ್‌ಗೆ ಇಳಿಸಿ ಸೂಚನೆ ನೀಡಲಾಗಿದೆ.

ಮೊದಲ ಬಾರಿಗೆ 3 ಸಾವಿರ ಕ್ಯೂಸೆಕ್‌ ನೀರು ಬಿಡಲು ಆದೇಶಿಸಲಾಗಿತ್ತು. ಎರಡನೇ ಬಾರಿಗೆ 12 ಸಾವಿರ, ಈಗ ಮೂರನೇ ಬಾರಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು ಸೂಚಿಸಲಾಗಿದೆ. ಈ ಆದೇಶದಿಂದ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುವ ಭೀತಿ ಎದುರಾಗಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ಅಲ್ಲದೆ, ಕಾವೇರಿ ವಿಚಾರವಾಗಿ ಕರ್ನಾಟಕಕ್ಕೆ ಸಾಲು ಸಾಲು ಸವಾಲುಗಳು ಎದುರಾಗಿವೆ.

ನಾಳೆ CWRC ಸಭೆ ಇದೆ. ಮುಂದಿನ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಕೂಡ ಇದೆ. ಮುಂದಿನ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ನೀರಿನ ಹಂಚಿಕೆ ಕುರಿತಂತೆ ಪ್ರಮುಖ ವಿಚಾರಣೆ ನಡೆಯಲಿದೆ.

Comments (0)

Your email address will not be published. Required fields are marked *

Back to top button