ದೇಶ/ವಿದೇಶ
ನೇಪಾಳದಲ್ಲಿ ಭೀಕರ ಪ್ರವಾಹ – 1 ಸಾವಿರ ಮಂದಿ ನಾಪತ್ತೆ ಶಂಕೆ!
Devastating floods in Nepal – 1,000 people feared missing!

ಕಠ್ಮಂಡು : ನೇಪಾಳದಲ್ಲಿ ಭೀಕರ ಪ್ರವಾಹ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ನೇಪಾಳ ರಸುವಾದಲ್ಲಿ ಟಿಬೆಟ್ ಗಡಿಯ ಬಳಿಯ ಇಡೀ ಗ್ರಾಮವೇ ಕೊಚ್ಚಿಹೋಗಿದೆ. ಘಟನೆಯಲ್ಲಿ ಅಪಾರ ಪ್ರಮಾಣದ ಜೀವಹಾನಿಯಾಗಿರುವ ಸಾಧ್ಯತೆಯಿದೆ.
ಸ್ಥಳೀಯ ಕಾಲಮಾನದ ಪ್ರಕಾರಣ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ನದಿ ದಂಡೆಯಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಭೋಟೆ ಕೋಶಿ ನದಿಯ ಉದ್ದಕ್ಕೂ ವಾಸಿಸುವ ನಿವಾಸಿಗಳು ಹೆಚ್ಚಿನ ನಿಗಾ ವಹಿಸಲು ಸೂಚಿಸಿದ್ದಾರೆ.
ಸುಮಾರು 1,000 ಜನರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ರಕ್ಷಣಾ ತಂಡಗಳು ಈಗಾಗಲೇ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿವೆ. ಆದರೆ, ಸಾವು ನೋವುಗಳು ಬಗ್ಗೆ ಸ್ಪಷ್ಟ ಮಾಹಿತಿ ತಿಳುಬಂದಿಲ್ಲ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.




