ನೇಪಾಳದಲ್ಲಿ ಜಲಪ್ರಳಯ – 160 ಮಂದಿ ಬಲಿ, 300 ಭಾರತೀಯರು ನಾಪತ್ತೆ!
Floods in Nepal – Hundreds missing, including 300 Indians!

ನವದೆಹಲಿ : ನೇಪಾಳದಲ್ಲಿ ಭೀಕರ ಪ್ರವಾಹ ಸಂಭವಿಸಿದ್ದು, ಸಾವಿನ ಸಂಖ್ಯೆ 160ಕ್ಕೆ ಏರಿಕೆಯಾಗಿದೆ. ಈ ಪ್ರಾಕೃತಿಕ ವಿಕೋಪದಲ್ಲಿ ನೂರಾರು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.
ಭಾರತೀಯರು ಹಾಗೂ ವಿದೇಶಿಗಳ ನಾಪತ್ತೆ ಭೀಕರ ಪ್ರವಾಹದ ಅಲೆಗೆ ಸಿಲುಕಿ ನೇಪಾಳಕ್ಕೆ ಭೇಟಿ ನೀಡಿದ್ದ ಹಲವು ವಿದೇಶಿ ಪ್ರವಾಸಿಗರು ಕಣ್ಮರೆಯಾಗಿದ್ದಾರೆ. ಭೀಕರ ಪ್ರವಾಹಕ್ಕೆ 300ಕ್ಕೂ ಅಧಿಕ ಭಾರತೀಯರು ಪ್ರವಾಹದಲ್ಲಿ ನಾಪತ್ತೆಯಾಗಿದ್ದಾರೆ.
ಸಂಕಷ್ಟದಲ್ಲಿರುವ ನೆರೆಯ ನೇಪಾಳಕ್ಕೆ ಭಾರತ ಸರ್ಕಾರ ತಕ್ಷಣವೇ ಸಹಾಯಹಸ್ತ ಚಾಚಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯದಲ್ಲಿ ಭಾರತೀಯ ಸೇನೆ ಸಕ್ರಿಯವಾಗಿ ಕೈಜೋಡಿಸಿದೆ. ಇದರೊಂದಿಗೆ ಅಗತ್ಯ ಪರಿಹಾರ ಸಾಮಗ್ರಿಗಳನ್ನು ನೇಪಾಳಕ್ಕೆ ರವಾನಿಸಲಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನೇಪಾಳ ಪ್ರಧಾನಿಯೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ರಕ್ಷಣಾ ಕಾರ್ಯಕ್ಕೆ ಬೇಕಾದ ಎಲ್ಲಾ ರೀತಿಯ ಅಗತ್ಯ ನೆರವು ನೀಡುವುದಾಗಿ ಭೇಟಿ ಮತ್ತು ಧೈರ್ಯ ತುಂಬಿದ್ದಾರೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಈ ದುರಂತದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಕನ್ನಡಿಗರ ಸುರಕ್ಷತೆಗೆ ಸರ್ಕಾರದ ಕಸರತ್ತು ನೇಪಾಳ ಪ್ರವಾಹದಲ್ಲಿ ಕನ್ನಡಿಗರು ಸಿಲುಕಿರುವ ಕುರಿತು ಮಾಹಿತಿ ಸಂಗ್ರಹಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಕನ್ನಡಿಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ತುರ್ತು ಮಾಹಿತಿ ಕಲೆಹಾಕಲು ನಿರ್ಧರಿಸಿರುವ ಸರ್ಕಾರ, ಪ್ರವಾಹದಲ್ಲಿ ಸಿಲುಕಿರುವವರ ವಿವರಗಳನ್ನು ನೀಡುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದೆ.
ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ಹಾಗೂ ಬೆಂಗಳೂರು ಮೂಲದ ನಾಲ್ವರು ಎನ್‌ಆರ್‌ಐ (NRI) ಕನ್ನಡಿಗರು ಪ್ರವಾಹದಲ್ಲಿ ನಾಪತ್ತೆಯಾಗಿದ್ದಾರೆ. ಮತ್ತೊಂದೆಡೆ, ಕರ್ನಾಟಕದ ಕಲಬುರಗಿ ಜಿಲ್ಲೆಯ ಇಬ್ಬರು ಸುರಕ್ಷಿತ ಸ್ಥಳಕ್ಕೆ ತಲುಪಿದ್ದಾರೆ.




