ಜಿಲ್ಲೆ
RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರ ಅಮಾನತು!
Two teachers suspended for participating in RSS route march!

ಬೆಂಗಳೂರು : RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಘಟನೆ ನಡೆದ 9 ತಿಂಗಳ ಬಳಿಕ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.
ಯಾದಗಿರಿ ಡಿಡಿಪಿಐ ಚನ್ನಬಸಪ್ಪ ಮುದೋಳ್ ಈ ಅಮಾನತು ಆದೇಶ ಹೊರಡಿಸಿದ್ದಾರೆ. ಹುಣಸಗಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಗುರುರಾಜ್ ಜೋಶಿ ಹಾಗೂ ಹುಣಸಗಿ ತಾಲೂಕಿನ ಕುಪ್ಪಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾಸಾಹೇಬ್ ದೇಶಮುಖ ಅಮಾನತು ಆದ ಶಿಕ್ಷಕರು.
ಆರ್ಎಸ್ಎಸ್ ಶತಮಾನೋತ್ಸವದ ಅಂಗವಾಗಿ ಕಳೆದ ವರ್ಷ ನವೆಂಬರ್ನಲ್ಲಿ ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ಬೃಹತ್ ಪಥಸಂಚಲನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಹುಣಸಗಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಗುರುರಾಜ್ ಜೋಶಿ ಹಾಗೂ ಕುಪ್ಪಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾಸಾಹೇಬ್ ದೇಶಮುಖ್ ಸಕ್ರಿಯವಾಗಿ ಭಾಗವಹಿಸಿದ್ದರು.




