ದೇಶ/ವಿದೇಶ

ನೇಪಾಳದಲ್ಲಿ ಭೀಕರ ಪ್ರವಾಹ – ಸಾವಿನ ಸಂಖ್ಯೆ 734ಕ್ಕೆ ಏರಿಕೆ, 2,500ಕ್ಕೂ ಅಧಿಕ ಮಂದಿ ನಾಪತ್ತೆ!

Devastating floods in Nepal – Death toll rises to 734, over 2,500 missing!

ಕಠ್ಮಂಡು : ನೇಪಾಳದಲ್ಲಿ ಭಾರೀ ಮಳೆ ಹಾಗೂ ಹಠಾತ್ ಪ್ರವಾಹದಿಂದ ಉಂಟಾದ ಪ್ರಾಕೃತಿಕ ವಿಕೋಪದ ದುರಂತದಲ್ಲಿ ಸಾವಿನ ಸಂಖ್ಯೆ 734ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 2,500 ಮಂದಿ ನಾಪತ್ತೆಯಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನದಿಗಳ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಪರಿಹಾರ ಕಾರ್ಯಾಚರಣೆಗಳು ತೀವ್ರಗೊಂಡಿದ್ದರೂ, ಹಾನಿಗೊಳಗಾದ ರಸ್ತೆಗಳು, ಮುರಿದುಬಿದ್ದ ಸೇತುವೆಗಳು ಹಾಗೂ ನೀರು ಸರಬರಾಜು ವ್ಯವಸ್ಥೆಯಿಂದಾಗಿ ಸಂತ್ರಸ್ತರಿಗೆ ಅಗತ್ಯ ನೆರವು ತಲುಪಿಸುವುದು ಆಡಳಿತಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಮಣ್ಣಿನ ಕುಸಿತ, ದಾರಿಗಳಲ್ಲಿ ತುಂಬಿಕೊಂಡಿರುವ ಅವಶೇಷಗಳು ಹಾಗೂ ಪ್ರತಿಕೂಲ ಹವಾಮಾನದ ನಡುವೆಯೂ ರಕ್ಷಣಾ ಸಿಬ್ಬಂದಿ ಪ್ರಾಣದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪ್ರವಾಹದಿಂದ ಮನೆ-ಮಠ ಕಳೆದುಕೊಂಡವರು ಹಾಗೂ ಸ್ಥಳಾಂತರಗೊಂಡ ರೋಗಿಗಳು ಕುಡಿಯುವ ನೀರು, ಆಹಾರ ಮತ್ತು ಇತರ ಮೂಲಭೂತ ವಸ್ತುಗಳ ತೀವ್ರ ಕೊರತೆ ಎದುರಿಸುತ್ತಿದ್ದಾರೆ. ಭಾರೀ ಮಳೆ ಮತ್ತು ದಟ್ಟ ಮಂಜಿನಿಂದಾಗಿ ಕೆಲಕಾಲ ಸ್ಥಗಿತಗೊಂಡಿದ್ದ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆಗಳು ಇಂದು 5ನೇ ದಿನಕ್ಕೆ ಕಾಲಿಟ್ಟಿವೆ. ಪರಿಸ್ಥಿತಿ ಕೊಂಚ ಸುಧಾರಿಸುತ್ತಿದ್ದಂತೆ ಹೆಲಿಕಾಪ್ಟರ್‌ಗಳು ಮತ್ತೆ ಕಾರ್ಯಾಚರಣೆಗೆ ಇಳಿದಿವೆ.

ಟಿಬೆಟ್ ಗಡಿ ಭಾಗದಲ್ಲಿರುವ ರಸುವಾ ಮತ್ತು ನುವಾಕೋಟ್ ಸೇರಿದಂತೆ ಅತ್ಯಂತ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ತಂಡಗಳು ಬೀಡುಬಿಟ್ಟಿವೆ. ಜೆಸಿಬಿ ಹಾಗೂ ಅತ್ಯಾಧುನಿಕ ಉಪಕರಣಗಳ ಸಹಾಯದಿಂದ ಅವಶೇಷಗಳ ನಡುವೆ ನಾಪತ್ತೆಯಾದವರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ.

Comments (0)

Your email address will not be published. Required fields are marked *

Back to top button