ರಾಜ್ಯ
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ಗೆ ನ್ಯಾಯಾಂಗ ಬಂಧನ!
Judicial arrest of IAS officer Gyanendra Kumar!

ಬೆಂಗಳೂರು : ಕರ್ನಾಟಕ ಲೋಕಸೇವಾ ಪರೀಕ್ಷಾ ನಿಯಂತ್ರಕರಾಗಿದ್ದ ಹಿರಿಯ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಬೆಂಗಳೂರಿನ 1ನೇ ಹೆಚ್ಚುವರಿ ಮುಖ್ಯ ಮಹಾನಗರ (ACJM) ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಕೆಪಿಎಸ್ಸಿ ಪರೀಕ್ಷಾ ವ್ಯವಹಾರ ಹಾಗೂ ನೇಮಕಾತಿ ಪ್ರಕ್ರಿಯೆಗಳಲ್ಲಿ ನಡೆದಿರುವ ಅವ್ಯವಹಾರಗಳು ಮತ್ತು ಅಕ್ರಮಗಳ ಕುರಿತಂತೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಜ್ಞಾನೇಂದ್ರ ಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಬಳಿಕ ಕಾನೂನು ಪ್ರಕ್ರಿಯೆಯಂತೆ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
ಸಿಐಡಿ ಪರ ವಾದ ಆಲಿಸಿದ ನ್ಯಾಯಾಧೀಶರು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಜ್ಞಾನೇಂದ್ರ ಕುಮಾರ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಈ ಬೆಳವಣಿಗೆಯಿಂದ ರಾಜ್ಯದ ಆಡಳಿತ ವಲಯದಲ್ಲಿ ಮತ್ತು KPSC ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ತನಿಖೆ ಮುಂದುವರೆದಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಮಹತ್ವದ ಮಾಹಿತಿಗಳು ಹೊರಬೀಳುವ ಸಾಧ್ಯತೆಯಿದೆ.




