ಕ್ರೈಂ ಸ್ಟೋರಿ
ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ – 2 ದಿನ ಪೊಲೀಸ್ ಕಸ್ಟಡಿಗೆ!
Another shock for Prajwal Revanna – remanded to police custody for 2 days!

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರ್ಯಾಗೃಹದಲ್ಲಿ ಜೈಲು ನಿಬಂಧನೆಗಳನ್ನು ಉಲ್ಲಂಘಿಸಿ ಸ್ಮಾರ್ಟ್ ಫೋನ್ ಬಳಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ತನಿಖಾಧಿಕಾರಿಗಳು, ಇಬ್ಬರೂ ಆರೋಪಿಗಳನ್ನು ಬಾಡಿ ವಾರಂಟ್ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸಲು ಕೋರ್ಟ್ಗೆ ಮನವಿ ಸಲ್ಲಿಸಿದ್ದರು.
ಪೊಲೀಸರ ಮನವಿಯನ್ನು ಪರಿಗಣಿಸಿದ ನ್ಯಾಯಾಧೀಶರು, ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ಅವರನ್ನು ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದ್ದಾರೆ. ಜೈಲಿನೊಳಗೆ ಮೊಬೈಲ್ ಫೋನ್ ತಲುಪಿದ್ದು ಹೇಗೆ? ಇದರ ಹಿಂದೆ ಯಾರ ಕೈವಾಡವಿದೆ? ಮತ್ತು ಜೈಲು ಸಿಬ್ಬಂದಿಗಳು ಶಾಮೀಲಾಗಿದ್ದಾರೆಯೇ ಎಂಬ ಬಗ್ಗೆ ವಿಚಾರಣೆ ನಡೆಸುವ ಸಾಧ್ಯತೆಯಿದೆ.




