ಜಿಲ್ಲೆ

ರಾಜ್ಯ ಪ್ರವಾಸ ಮಾಡಲು ಬೊಮ್ಮಾಯಿಗೆ ಪ್ರಧಾನಿ ಮೋದಿ ಸೂಚನೆ

ಬೆಂಗಳೂರು : ಜನ್ಮದಿನದ ಅಂಗವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ಮೋದಿ ಅವರು ದೂರವಾಣಿ ಕರೆ ಮಾಡಿ ಶುಭಾಷಯ ಕೋರಿದ್ದಾರೆ. ಅಲ್ಲದೆ, ಲೋಕಸಭೆ ಚುನಾವಣೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಲು ಸೂಚಿಸಿದ್ದಾರೆ.

ರಾಮನ ಆಶೀರ್ವಾದ ನಿಮ್ಮ ಮೇಲೆ ಇರಲಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿಕೊಂಡು ರಾಜ್ಯ ಪ್ರವಾಸ ಮಾಡಿ, ಎಂದು ಪ್ರಧಾನಿ ಮೋದಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಬೊಮ್ಮಾಯಿ , ಪ್ರಧಾನಿ ಅವರ ಶುಭಾಶಯ ಹಾಗೂ ಹಿತನುಡಿಯಿಂದ ನನ್ನ ಆತ್ಮಸ್ಥೈರ್ಯ , ಹುಮ್ಮಸ್ಸು ಇಮ್ಮಡಿಗೊಂಡಿದೆ. ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕೂಡ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಷಯ ಕೋರಿದ್ದಾರೆ.

Comments (0)

Your email address will not be published. Required fields are marked *

Back to top button